Kundapra.com ಕುಂದಾಪ್ರ ಡಾಟ್ ಕಾಂ

ಪೆಟ್ರೋಲ್, ಡಿಸೇಲ್ ಬೆಲೆ ಎರಿಕೆ ಖಂಡಿಸಿ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದೇಶದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆ ಏರಿಕೆ ಹಾಗೂ ಕೇಂದ್ರದ ಬಿಜೆಪಿ ಸರಕಾರದ ಜನವಿರೋಧಿ ನೀತಿ ಖಂಡಿಸಿ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿಯವರ ನೇತೃತ್ವದಲ್ಲಿ ವಂಡ್ಸೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೋಮವಾರ ವಂಡ್ಸೆಯಲ್ಲಿ ಪ್ರತಿಭಟನೆ ನಡೆಯಿತು.

ಈ ಸಂದರ್ಭ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಮಾತನಾಡಿ, ದೇಶದಲ್ಲಿ ಅರ್ಥಿಕ ಕುಸಿತ, ನಿರುದ್ಯೋಗ ಸಮಸ್ಯೆಯಿಂದ ಜನ ಕಂಗೆಟ್ಟಿದ್ದು, ಅದರೊಂದಿಗೆ ದಿನದಿಂದ ದಿನಕ್ಕೆ ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳವಾಗುತ್ತಿರುವುದು ಬಿಸಿವತುಪ್ಪವಾಗಿ ಪರಿಣಮಿಸಿದೆ. 2014 ರಲ್ಲಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 6330 ರೂ. ಇದ್ದಿದ್ದು ಈಗ 3035 ರೂ. ಗೆ ಕುಸಿದಿದೆ, ಆದರೂ ಕೇಂದ್ರ ಸರ್ಕಾರ ಬೆಲೆ ಎರಿಕೆ ಮಾಡಿರುವುದು ಖಂಡನೀಯ ಎಂದು ಕಿಡಿಕಾರಿದ ಅವರು ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಜನವಿರೋ ನೀತಿಯ ವಿರುದ್ಧ ಗ್ರಾಮ ಮಟ್ಟದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್‌ಕುಮಾರ್ ಶೆಟ್ಟಿ, ಮುಖಂಡರುಗಳಾದ ಸಂಪಿಗೇಡಿ ಸಂಜೀವ ಶೆಟ್ಟಿ, ಎಸ್. ರಾಜು ಪೂಜಾರಿ, ಮಂಜಯ್ಯ ಶೆಟ್ಟಿ, ಉದಯಕುಮಾರ್ ಶೆಟ್ಟಿ, ವಾಸುದೇವ ಪೈ, ಪ್ರಸನ್ನಕುಮಾರ್ ಶೆಟ್ಟಿ, ಸಂತೋಷ್ ಕುಮಾರ್ ಶೆಟ್ಟಿ ಹಕ್ಲಾಡಿ, ಶರತ್‌ಕುಮಾರ್ ಶೆಟ್ಟಿ, ಕಿರಣ್ ಹೆಗ್ಡೆ, ಯುತ್ ಕಾಂಗ್ರೆಸ್ ಅಧ್ಯಕ್ಷ ಶೇಖರ ಪೂಜಾರಿ, ಕಾರ್ಯಾಧ್ಯಕ್ಷ ಪ್ರಶಾಂತ ಪೂಜಾರಿ, ಮಹಿಳಾ ಕಾಂಗ್ರೆಸ್‌ನ ಮಂಜುಳಾ ದೇವಾಡಿಗ ಮೊದಲಾದವರು ಇದ್ದರು.

ಇದನ್ನೂ ಓದಿ:
► ಬೈಂದೂರು: ಪೆಟ್ರೋಲ್, ಡಿಸೇಲ್ ಬೆಲೆ ಎರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ – https://kundapraa.com/?p=39297 .

 

Exit mobile version