Site icon Kundapra.com ಕುಂದಾಪ್ರ ಡಾಟ್ ಕಾಂ

ಕೋವಿಡ್ ಸೋಂಕಿಗೆ 70 ವರ್ಷದ ಬೈಂದೂರಿನ ವೃದ್ಧ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೋವಿಡ್ ಸೋಂಕಿಗೆ 70 ವರ್ಷದ ವೃದ್ಧರೊಬ್ಬರು ಬಲಿಯಾಗಿದ್ದಾರೆ, ಇದರೊಂದಿಗೆ ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಬಲಿಯಾದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಬೈಂದೂರು ತಾಲೂಕು ಉಪ್ಪುಂದದ 70 ವರ್ಷದ ವೃದ್ಧರೊಬ್ಬರಿಗೆ ಕಳೆದ 15 ದಿನಗಳ ಹಿಂದೆ ಕೋವಿಡ್ ದೃಢ ಪಟ್ಟ ಹಿನ್ನೆಲೆಯಲ್ಲಿ ಅವರನ್ನು ಉಡುಪಿ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಾದ ದಿನದಿಂದ ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದ್ದು ಚೇತರಿಕೆ ಕಂಡಿದ್ದರು. ಆದರೆ ಇಂದು ಸಾವನ್ನಪ್ಪಿದ್ದಾರೆ ಎಂದು ಅರೋಗ್ಯ ಇಲಾಖೆ ದೃಢ ಪಡಿಸಿದೆ.

ರವಿವಾರ ಉಡುಪಿಯ ಕೋವಿಡ್-19 ಆಸ್ಪತ್ರೆಯಲ್ಲಿ ದಾವಣಗೆರೆ ಮೂಲದ ವೃದ್ಧರೊಬ್ಬರು ಮೃತಪಟ್ಟಿದ್ದರು. ಮೃತಪಟ್ಟ ವ್ಯಕ್ತಿ ದಾವಣಗೆರೆ ಮೂಲದವರಾದ ಕಾರಣ ಉಡುಪಿ ಜಿಲ್ಲೆಯ ಮೃತರ ಪಟ್ಟಿಯಲ್ಲಿ ಇದನ್ನು ಪರಿಗಣಿಸಲಾಗಿಲ್ಲ.

Exit mobile version