Kundapra.com ಕುಂದಾಪ್ರ ಡಾಟ್ ಕಾಂ

ಉಪ್ಪುಂದ ಸರಕಾರಿ ಪ.ಪೂ ಕಾಲೇಜು: ದ್ವಿತೀಯ ಪಿಯು ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಉಪ್ಪುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ 88.65% ಫಲಿತಾಂಶ ದಾಖಲಿಸುವ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ.

ಕಾಲೇಜು ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ, ವಾಣಿಜ್ಯ ವಿಭಾಗದಲ್ಲಿ ಶೇ.96 ಫಲಿತಾಂಶ ದಾಖಲಿಸಿದೆ. 19 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶ್ವೇತಾ (512), ವಾಣಿಜ್ಯ ವಿಭಾಗದಲ್ಲಿ (567), ಕಲಾ ವಿಭಾಗದಲ್ಲಿ ಸುಶ್ಮಿತಾ ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

 

Exit mobile version