Kundapra.com ಕುಂದಾಪ್ರ ಡಾಟ್ ಕಾಂ

ದ್ವಿತೀಯ ಪಿಯುಸಿ: ಭಂಡಾರ್ಕಾರ್ಸ್ ಪಿ.ಯು ಕಾಲೇಜಿಗೆ ಶೇ. 94.37 ಫಲಿತಾಂಶ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿ ಶೇ. 94.37 ಫಲಿತಾಂಶ ಪಡೆದುಕೊಂಡಿದ್ದಾರೆ. 24 ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ಹಾಗೂ 82 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಶ್ರೇಯಾ ಭಟ್ 588 ಅಂಕ ಪಡೆದು ರಾಜ್ಯಕ್ಕೆ ಹತ್ತನೇ ರ್ಯಾಂಕ್, ಜಿಲ್ಲೆಗೆ 5ನೇ ರ್ಯಾಂಕ್ ಪಡೆದಿದ್ದು, ಕಾಲೇಜಿಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಕೆ.ಕಿರಣ್ ಕಾಮತ್ (572) ದ್ವಿತೀಯ, ಪಲ್ಲವಿ (544) ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಕೀರ್ತಿ ಕೆ 574 ಪ್ರಥಮ, ಕೇಶವ ಪೂಜಾರಿ (568) ದ್ವಿತೀಯ, ಸಾಗರಿಕಾ ಎನ್ (559) ಹಾಗೂ ಸೃಜನ್ ಆರ್. ಕುಲಾಲ್ (559) ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಕಲಾ ವಿಭಾಗದಲ್ಲಿ ಭ್ರಮರ ಕೆ (552) ಪ್ರಥಮ , ಸುನಿಲ್ ನಾಯಕ್ (503) ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಕಾಲೇಜಿನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Exit mobile version