Kundapra.com ಕುಂದಾಪ್ರ ಡಾಟ್ ಕಾಂ

ವಿಕಲಚೇತನರ ವಿವಿಧ ಯೋಜನೆ, ಸ್ಪರ್ಧಾತ್ಮಕ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಉಡುಪಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಜಿಲ್ಲೆಯ ಅಂಗವಿಕಲರಿಗಾಗಿ, ಸರ್ಕಾರ ಅನುಷ್ಟಾನಗೊಳಿಸಿರುವ ಯೋಜನೆಗಳಾದ ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್, ಅಂಗವಿಕಲರ ದೈನಂದಿನ ಚಟುವಟಿಕೆಗಳಿಗೆ ಅಗತ್ಯವಿರುವ ಸಾಧನ ಸಲಕರಣೆ, ನಿವಾರಣಾ ಶಸ್ತ್ರಚಿಕಿತ್ಸೆಗೆ ವೈದ್ಯಕೀಯ ನೆರವು, ವಿಕಲಚೇತನರ ಬಸ್ ಪಾಸ್, ಸ್ವಯಂ ಉದ್ಯೋಗಕ್ಕಾಗಿ ಶೇ50%ರಷ್ಟು ಬ್ಯಾಂಕ್ ಸಾಲ ಮತ್ತು ಶೇ.50%ರಷ್ಟು ಸಬ್ಸಿಡಿ ಮೂಲಕ ಆಧಾರ ಸಾಲ ಯೋಜನೆ, ಯಂತ್ರಚಾಲಿತ ದ್ವಿಚಕ್ರವಾಹನ, ವಿಕಲಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ವಿವಾಹ ಪ್ರೋತ್ಸಾಹಧನ, ಅಂಧ ಮಹಿಳೆಗೆ ಜನಿಸುವ ಮೊದಲನೇ ಮತ್ತು 2ನೇ ಮಗುವಿನ ಪಾಲನೆಗಾಗಿ ಶಿಶುಪಾಲನಾ ಭತ್ಯೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಸ್ಪರ್ಧಾ ಚೇತನ ಯೋಜನೆಗಳ ಷರತ್ತುಗಳಂತೆ 2020-21ನೇ ಸಾಲಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಯೋಜನೆಗಳ ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: 0820-2574810 / 811 ಕರೆಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ ಮತ್ತು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಸಿಂಡಿಕೇಟ್ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ಈ ಕಛೇರಿಯನ್ನು ಖುದ್ದಾಗಿಯೂ ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಚಂದ್ರ ನಾಯ್ಕ್ ಅವರು ತಿಳಿಸಿದ್ದಾರೆ.

 

Exit mobile version