Kundapra.com ಕುಂದಾಪ್ರ ಡಾಟ್ ಕಾಂ

ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ವಿವಿಧ ಸೌಲಭ್ಯಗಳು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ(ನಿ)ದಿಂದ ಮಡಿವಾಳ ಸಮುದಾಯಕ್ಕೆ ಸೇರಿದ (ಅಗಸ, ಚಕಲ, ಧೋಬಿ, ಮಡಿವಾಳ, ಮನ್ನನ್, ಪರಿತ್, ರಾಜಕ, ಸಕಲ, ವನ್ನನ್, ವೆಲ್ಲುತೇಡನ್, ಸಾಕಲವಾಡು) ಜನರ ಆರ್ಥಿಕ ಅಭಿವೃದ್ಧಿಗಾಗಿ 1.ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ 2.ಸ್ವಯಂ ಉದ್ಯೋಗ ಸಾಲ ಯೋಜನೆ 3.ಸ್ವಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ 4. ಅರಿವು ಶೈಕ್ಷಣಿಕ ಸಾಲ ಯೋಜನೆ ಮತ್ತು 5.ಗಂಗಾಕಲ್ಯಾಣ ನೀರಾವರಿ ಯೋಜನೆಗಳಲ್ಲಿ ಸಹಾಯಧನ ಹಾಗೂ ಸಾಲ ಸೌಲಭ್ಯ ಒದಗಿಸಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಇಚ್ಚಿಸುವವರು ಉಚಿತವಾಗಿ ಅರ್ಜಿ ನಮೂನೆಯನ್ನು ಜಿಲ್ಲಾ ಕಛೇರಿಯಲ್ಲಿ ಅಥವಾ ನಿಗಮದ ವೆಬ್ಸೈಟ್ www.dbcdc.karnataka.gov.in ನಲ್ಲಿ ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಫೋಟೋ ಮತ್ತು ಇತರೆ ದಾಖಾಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಅಥವಾ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಾಲಾತಿಗಳೊಂದಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಳ ಅಭಿವೃದ್ಧಿ ನಿಗಮ (ನಿ), ಉಡುಪಿ ಜಿಲ್ಲಾ ಕಛೇರಿಗೆ ಆಗಸ್ಟ್ 3 ರ ಒಳಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ನಿಗಮದ ದೂರವಾಣಿ ಸಂ.0820-2574882 ಅಥವಾ ವೆಬ್ ಸೈಟ್ ಸಂಪರ್ಕಿಸುವAತೆ ಪ್ರಕಟಣೆ ತಿಳಿಸಿದೆ.

Exit mobile version