Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಭಾನುವಾರ 169 ಪಾಸಿಟಿವ್ ದೃಢ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜು.26ರ ಭಾನುವಾರ 169 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 31, ಉಡುಪಿ ತಾಲೂಕಿನ 86 ಹಾಗೂ ಕಾರ್ಕಳ ತಾಲೂಕಿನ 52 ಮಂದಿಗೆ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ 106 ಪುರುಷರು, 63 ಮಹಿಳೆಯರು ಸೇರಿದ್ದಾರೆ.ಇಂದು 125 ಮಂದಿ ಬಿಡುಗಡೆಗೊಂಡಿದ್ದಾರೆ. ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ.

493 ನೆಗೆಟಿವ್:
ಈ ತನಕ ಒಟ್ಟು 28,287 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 24,335 ನೆಗೆಟಿವ್, 3,388 ಪಾಸಿಟಿವ್ ಬಂದಿದ್ದು, 564 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 493 ನೆಗೆಟಿವ್, 182 ಪಾಸಿಟಿವ್ ಬಂದಿದೆ. ಒಟ್ಟು 1,701 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ.

1241 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 3,388 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 2,134 ಮಂದಿ ಬಿಡುಗಡೆಯಾಗಿದ್ದು, 1,241 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 14 ಮಂದಿ ಮೃತಪಟ್ಟಿದ್ದಾರೆ.

ಇನ್ನಷ್ಟು ಮಾಹಿತಿಗೆ ಕೆಲವು ಸಮಯದ ನಂತರ ಇದೇ ಲಿಂಕ್ ನೋಡಿ

 

Exit mobile version