ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜು.30ರ ಗುರುವಾರ 248 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ.
762 ನೆಗೆಟಿವ್:
ಈ ತನಕ ಒಟ್ಟು 31,044 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 26,292 ನೆಗೆಟಿವ್, 4,143 ಪಾಸಿಟಿವ್ ಬಂದಿದ್ದು, 609 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 762 ನೆಗೆಟಿವ್, 248 ಪಾಸಿಟಿವ್ ಬಂದಿದೆ. ಒಟ್ಟು 1,403 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ.
1,669 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 4,143 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 2,445 ಮಂದಿ ಬಿಡುಗಡೆಯಾಗಿದ್ದು, 1,669 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 29 ಮಂದಿ ಮೃತಪಟ್ಟಿದ್ದಾರೆ.