Site icon Kundapra.com ಕುಂದಾಪ್ರ ಡಾಟ್ ಕಾಂ

ನಿವೃತ್ತ ಶಿಕ್ಷಕ ತೇಜಪ್ಪ ಶೆಟ್ಟಿ ನಿಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕಂಬದಕೋಣೆ ಗ್ರಾಮದ ಹಳಗೇರಿ ಕೇಳಾಮನೆ ನಿವಾಸಿ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ತೇಜಪ್ಪ ಶೆಟ್ಟಿ (೮೧) ಶನಿವಾರ ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಅವರು ಬೆಳ್ತಂಗಡಿ, ನಾವುಂದ, ಕಂಬದಕೋಣೆ ಮೊದಲಾದ ಸರಕಾರಿ ಪ್ರೌಢಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ೩೬ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಕೃಷಿ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿಯೂ ಅವರು ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ, ಪುತ್ರಿ, ಪುತ್ರ ಹಾಗೂ ಬಂಧುಗಳು ಹಾಗೂ ಶಿಷ್ಯವರ್ಗವನ್ನು ಅಗಲಿದ್ದಾರೆ.

 

Exit mobile version