Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಮಂಗಳವಾರ 170 ಪಾಸಿಟಿವ್, 1352 ನೆಗೆಟಿವ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಆ.04ರ ಮಂಗಳವಾರ 170 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 55, ಉಡುಪಿ ತಾಲೂಕಿನ 74 ಹಾಗೂ ಕಾರ್ಕಳ ತಾಲೂಕಿನ 39 ಮಂದಿಗೆ ಪಾಸಿಟಿವ್ ಬಂದಿದೆ. 2 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಒಟ್ಟು ಪ್ರಕರಣಗಳಲ್ಲಿ 109 ಪುರುಷರು, 61 ಮಹಿಳೆಯರು ಸೇರಿದ್ದಾರೆ. ಇಂದು 136 ಮಂದಿ ಬಿಡುಗಡೆಗೊಂಡಿದ್ದಾರೆ.

1352 ನೆಗೆಟಿವ್:
ಈ ತನಕ ಒಟ್ಟು 36,200 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 30,526 ನೆಗೆಟಿವ್, 4,970 ಪಾಸಿಟಿವ್ ಬಂದಿದ್ದು, 704 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 1352 ನೆಗೆಟಿವ್, 170 ಪಾಸಿಟಿವ್ ಬಂದಿದೆ. ಒಟ್ಟು 1,193 ಮಂದಿ ಹೋಮ್ ಕ್ವಾರಂಟೈನಿನಲ್ಲಿದ್ದಾರೆ.

1,980 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 4,970 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 2,948 ಮಂದಿ ಬಿಡುಗಡೆಯಾಗಿದ್ದು, 1,980 ಮಂದಿ ಕೊರೋನಾ ಸೋಂಕಿತರಿಗೆ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ ಕೊರೋನಾ ಪಾಸಿಟಿವ್ ಇದ್ದ 42 ಮಂದಿ ಮೃತಪಟ್ಟಿದ್ದಾರೆ.

Exit mobile version