Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ತಾಲೂಕು ಪಂಚಾಯತ್ ಅಧ್ಯಕ್ಷರಾಗಿ ಮಹೇಂದ್ರ ಪೂಜಾರಿ, ಉಪಾಧ್ಯಕ್ಷರಾಗಿ ಮಾಲಿನಿ ಕೆ. ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು, ಅ11: ನೂತನವಾಗಿ ಅಸ್ತಿತ್ವಕ್ಕೆ ಬಂದ ಬೈಂದೂರು ತಾಲೂಕು ಪಂಚಾಯತಿಯ ಪ್ರಥಮ ಅಧ್ಯಕ್ಷರಾಗಿ ಮಹೇಂದ್ರ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಮಾಲಿನಿ ಕೆ. ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬೈಂದೂರು ತಾಲೂಕು ಪಂಚಾಯತಿಯಲ್ಲಿ ಮಂಗಳವಾರ ನಡೆದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮಹೇಂದ್ರ ಕುಮಾರ್, ಉಪಾಧ್ಯಕ್ಷ ಸ್ಥಾನಕ್ಕೆ ಮಾಲಿನಿ ಕೆ. ನಾಮಪತ್ರ ಸಲ್ಲಿಸಿದ್ದು, ಬೇರಾರೂ ನಾಮಪತ್ರ ಸಲ್ಲಿಸದಿರುವುದರಿಂದ ಅವಿರೋಧ ಆಯ್ಕೆ ನಡೆದಿದೆ.

ಅಧಿಕಾರ ಸ್ವೀಕರಿಸಿದ ಅಧ್ಯಕ್ಷ ಮಹೇಂದ್ರ ಪೂಜಾರಿ ಮಾತನಾಡಿ ಎಲ್ಲಾ ಸದಸ್ಯರ ಸಹಕಾರದಿಂದ ಅವಿರೋಧವಾಗಿ ಆಯ್ಕೆಯಾಗುವಂತಾಯಿತು. ಬೆಂಬಲಿಸಿದ ಸಚಿವರು, ಶಾಸಕರು ಹಾಗೂ ಪಕ್ಷದ ಪ್ರಮುಖರಿಗೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು. ಮುಂದಿನ ದಿನಗಳಲ್ಲಿ ತಾಲೂಕು ಅಭಿವೃದ್ಧಿಯ ಬಗ್ಗೆ ಎಲ್ಲರೂ ಒಟ್ಟಾಗಿ ಹೆಚ್ಚಿನ ಗಮನ ಹರಿಸುತ್ತೇವೆ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

ಕುಂದಾಪುರ ಉಪವಿಭಾಗಾಧಿಕಾರಿ ರಾಜು ಅವರು ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಬೈಂದೂರು ತಹಶೀಲ್ದಾರ್ ಬಸಪ್ಪ ಪೂಜಾರಿ, ಕಾರ್ಯನಿರ್ವಹಣಾಧಿಕಾರಿ ಭಾರತಿ ಅವರು ಉಪಸ್ಥಿತರಿದ್ದರು.

ಈ ಸಂದರ್ಭ ಬೈಂದೂರು ಬಿಜೆಪಿ ಅಧ್ಯಕ್ಷ ದೀಪಕಕುಮಾರ್ ಶೆಟ್ಟಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಜಿ.ಪಂ ಸದಸ್ಯರಾದ ಬಾಬು ಶೆಟ್ಟಿ, ಸುರೇಶ್ ಬಟವಾಡಿ ಸೇರಿದಂತೆ ಬಿಜೆಪಿ ಪಕ್ಷದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು/ಕುಂದಾಪ್ರ ಡಾಟ್ ಕಾಂ ಸುದ್ದಿ/

ಇದನ್ನೂ ಓದಿ:
► ಕುಂದಾಪುರ ತಾಲೂಕು ಪಂಚಾಯತ್ ನೂತನ ಅಧ್ಯಕ್ಷರಾಗಿ ಎಚ್‌. ಇಂದಿರಾ ಶೆಟ್ಟಿ ಆಯ್ಕೆ – https://kundapraa.com/?p=40259 .

Exit mobile version