Site icon Kundapra.com ಕುಂದಾಪ್ರ ಡಾಟ್ ಕಾಂ

ಕೃಷಿ ಪ್ರಶಸ್ತಿ-ಭತ್ತದ ಬೆಳೆ ಸ್ವರ್ಧೆಗೆ ರೈತರಿಂದ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸ್ತಕ ಸಾಲಿನ ಕೃಷಿ ಪ್ರಶಸ್ತಿ ರೈತರಿಗೆ ಉತ್ಪದನಾ ಬಹುಮಾನ ಕಾರ್ಯಕ್ರಮದಡಿ ಮುಂಗಾರು ಭತ್ತದ ಬೆಳೆಯಲ್ಲಿ ಬೆಳೆ ಸ್ವರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ.

ಭತ್ತದ ಬೆಳೆಯಲ್ಲಿ ರೈತರು ವಿವಿಧ ಹಂತದ ಬೆಳೆ ಸ್ವರ್ದೆಗೆ ಪ್ರವೇಶ ಶುಲ್ಕವನ್ನು ಪಾವತಿಸಿ ಅರ್ಜಿ,ಭೂ ಮಾಲೀಕತ್ವ ಕ್ಷೇತ್ರ ಕುರಿತ ಕಂದಾಯ ಇಲಾಖೆಯ ದಾಖಲಾತಿ ಅಥವಾ ಗುತ್ತಿಗೆ ಕರಾರು ಪತ್ರ ಗಳೊಂದಿಗೆ ಸೆಪ್ಟೆಂಬರ್ 15 ರೊಳಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಬಹುದಾಗಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು. ಎಂದು ಉಡುಪಿ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:
► ಕೃಷಿ ಪಂಡಿತ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ – https://kundapraa.com/?p=40294 .

Exit mobile version