ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿಯಲ್ಲಿ ನಡೆದ ದೋಣಿ ದುರಂತದಲ್ಲಿ ನಾಲ್ವರು ನಾಪತ್ತೆಯಾಗಿದ್ದು ಶೋಧ ಕಾರ್ಯ ನಡೆಯುತ್ತಿದೆ. ಒಟ್ಟು 12 ಮಂದಿ ಇದ್ದರು ಎನ್ನಲಾಗುತ್ತಿದ್ದು, ಅಸ್ವಸ್ಥಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿದ್ದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ.
ಕೊಡೇರಿಯ ಸಾಗರಶ್ರೀ ಎಂಬ ಹೆಸರಿನ ಜೋಡಿ ದೋಣಿ ಮೀನುಗಾರಿಕೆ ಮುಗಿಸಿ ಹಿಂದಿರುಗುತ್ತಿದ್ದ ಸಂದರ್ಭ ವಿಪರೀತ ಗಾಳಿ, ಸಮುದ್ರದ ಅಲೆಗಳ ರಭಸಕ್ಕೆ ಬಂದರು ಪ್ರವೇಶಿಸುವ ಬದುವಿನ ಕಲ್ಲಿನ ತಡೆಗೋಡೆಗೆ ಬಡಿದು ಮಗುಚಿ ಬಿದ್ದಿದೆ. ದೋಣಿಯಲ್ಲಿ ಸುಮಾರು 12 ಮಂದಿ ಮೀನುಗಾರರಿದ್ದರು ಎನ್ನಲಾಗಿದ್ದು ಈ ಪೈಕಿ ನಾಪತ್ತೆಯಾಗಿರುವುದು ದೃಢವಾಗಿದೆ. ದೋಣಿಯನ್ನು ಮೇಲೆ ಎಳೆಯಲಾಗುತ್ತಿದೆ. ಕುಂದಾಪ್ರ ಡಾಟ್ ಕಾಂ.
ಘಟನಾ ಸ್ಥಳಕ್ಕೆ ಗಂಗೊಳ್ಳಿ ಕರಾವಳಿ ಕಾವಲು ಠಾಣೆಯ ಸಿಬ್ಬಂದಿಗಳು ತೆರಳಿದ್ದಾರೆ. ಬೈಂದೂರು ಶಾಸಕರಾದ ಶ್ರೀ ಸುಕುಮಾರ ಶೆಟ್ಟಿ, ಹಾಗೂ ಮಾಜಿ ಶಾಸಕರಾದ ಗೋಪಾಲ ಪೂಜಾರಿಯವರು ಭೇಟಿ ನೀಡಿದ್ದಾರೆ. ರಕ್ಷಣಾ ಸಿಬ್ಬಂದಿಗಳು, ಸ್ಥಳೀಯರು ಹಾಗೂ ಮೀನುಗಾರರಿಂದ ರಕ್ಷಣಾ ಕಾರ್ಯಚರಣೆ ಮುಂದುವರಿದಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/
ಇದನ್ನೂ ಓದಿ:
► ಕೊಡೇರಿ ದೋಣಿ ದುರಂತ: ನಾಪತ್ತೆಯಾದ ನಾಲ್ವರಿಗಾಗಿ ಮುಂದುವರಿದ ಶೋಧ ಕಾರ್ಯ – https://kundapraa.com/?p=40362 .