Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಮಂಗಳವಾರ 421 ಪಾಸಿಟಿವ್,1200 ನೆಗೆಟಿವ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಆ.18ರ ಮಂಗಳವಾರ 421 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 158, ಉಡುಪಿ ತಾಲೂಕಿನ 203 ಹಾಗೂ ಕಾರ್ಕಳ ತಾಲೂಕಿನ50 ಮಂದಿಗೆ ಪಾಸಿಟಿವ್ ಬಂದಿದೆ. 10 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ.

ಒಟ್ಟು ಪ್ರಕರಣಗಳಲ್ಲಿ 142 ಸಿಂಥಮೇಟಿವ್ ಹಾಗೂ 279 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, 224 ಪುರುಷರು, 197 ಮಹಿಳೆಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 142, ILI 90, ಸಾರಿ 17 ಪ್ರಕರಣವಿದ್ದು, 158 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. 6 ಮಂದಿ ಅಂತರ್ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಇಂದು 177 ಮಂದಿ ಆಸ್ಪತ್ರೆಯಿಂದ ಹಾಗೂ 144 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ.

1200 ನೆಗೆಟಿವ್:
ಈ ತನಕ ಒಟ್ಟು 57576 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 47824 ನೆಗೆಟಿವ್, 8666 ಪಾಸಿಟಿವ್ ಬಂದಿದ್ದು, 1086 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 1200 ನೆಗೆಟಿವ್, 421 ಪಾಸಿಟಿವ್ ಬಂದಿದೆ.

2,631 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 8666 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 5951 ಮಂದಿ ಬಿಡುಗಡೆಯಾಗಿದ್ದು, ಒಟ್ಟು 2637 ಸಕ್ರಿಯ ಪ್ರಕರಣಗಳಲ್ಲಿ 1321 ಮಂದಿ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಮೂಲಕ ನಿಗಾದಲ್ಲಿದ್ದಾರೆ ಹಾಗೂ 1316ಮಂದಿ ಹೋಮ್ ಐಸೋಲೇಶನಿನಲ್ಲಿದ್ದಾರೆ. ಈವರೆಗೆ ಒಟ್ಟು 78 ಮಂದಿ ಮೃತಪಟ್ಟಿದ್ದಾರೆ.

Exit mobile version