Kundapra.com ಕುಂದಾಪ್ರ ಡಾಟ್ ಕಾಂ

ಉಪ್ಪಾರ ಅಭಿವೃದ್ಧಿ ನಿಗಮದಿಂದ ಸಹಾಯಧನ ಮತ್ತು ಸಾಲ ಸೌಲಭ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸ್ತಕ ಸಾಲಿನ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದಿಂದ ಉಪ್ಪಾರ ಮತ್ತು ಅದರ ಉಪಜಾತಿಗಳಿಗೆ ಸೇರಿದ ಜನರ ಆರ್ಥಿಕ ಆರ್ಥಿಕ ಅಭಿವೃದ್ಧಿಗಾಗಿ , ಸ್ವಯಂ ಉದ್ಯೋಗ ಸಾಲ ಯೋಜನೆ ಮತ್ತು ಅರಿವು ಶೈಕ್ಷಣಿಕ ಸಾಲ ಯೋಜನೆಗಳಲ್ಲಿ ಸಾಲ-ಸೌಲಭ್ಯ ಮತ್ತು ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 5 ಕೊನೆಯ ದಿನ ಆಗಿದೆ.

ಅರ್ಜಿ ನಮೂನೆಯನ್ನು ಜಿಲ್ಲಾ ಕಛೇರಿ ಅಥವಾ ನಿಗಮದ ವೆಬ್‌ಸೈಟ್‌ನಲ್ಲಿ ಪಡೆದು ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಫೋಟೋ ಮತ್ತು ವಿದ್ಯಾರ್ಥಿಗಳ ವ್ಯಾಸಂಗದ ದಾಖಾಲಾತಿಗಳನ್ನು ನಿಗಮದ ವೆಬ್‌ಸೈಟ್ www.dbcdc.karnataka.gov.in ಮೂಲಕ ಸಲ್ಲಿಸಬಹುದು ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಳ ಅಭಿವೃದ್ಧಿ ನಿಗಮ (ನಿ), ಉಡುಪಿ ಜಿಲ್ಲಾ ಕಛೇರಿಗೆ ಸೆಪ್ಟೆಂಬರ್ 5 ರೊಳಗೆ ಸಲ್ಲಿಸಬಹುದು .

Exit mobile version