Site icon Kundapra.com ಕುಂದಾಪ್ರ ಡಾಟ್ ಕಾಂ

ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ ಸಹಾಯಧನ ಮತ್ತು ಸಾಲ ಸೌಲಭ್ಯ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸ್ತಕ ಸಾಲಿನ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ ದಿಂದ ಮಡಿವಾಳ ಸಮಾಜ ಹಾಗೂ ಅದರ ಉಪಜಾತಿಗಳಿಗೆ ಸೇರಿದ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಅರಿವು ,ಶೈಕ್ಷಣಿಕ ಸಾಲ ಯೋಜನೆ ಮತ್ತು .ಗಂಗಾಕಲ್ಯಾಣ ನೀರಾವರಿ ಯೋಜನೆಗಳಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ ವಾಗಿದ್ದು, ಅರ್ಜಿ ಮತ್ತು ಅಗತ್ಯ ದಾಖಲೆಗಳನ್ನು ಆನ್-ಲೈನ್ www.dbcdc.karnataka.gov.in ಮೂಲಕ ಅಥವಾ ನೇರವಾಗಿ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಡಿ. ದೇವರಾಜ ಅರಸು ಹಿಂದುಳಿದ ವರ್ಗಳ ಅಭಿವೃದ್ಧಿ ನಿಗಮ (ನಿ), ಉಡುಪಿ ಜಿಲ್ಲೆ ಇವರನ್ನು ಸಂಪರ್ಕಿಸುವಂತೆ ಕೋರಿದೆ.

 

Exit mobile version