Site icon Kundapra.com ಕುಂದಾಪ್ರ ಡಾಟ್ ಕಾಂ

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹುದ್ದೆಗೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತುತ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಸ್ತ್ರೀ ರೋಗ, ಅರೆವಳಿಕೆ, ಮತ್ತು ಮಕ್ಕಳ ತಜ್ಞರು, ಎಲ್.ಹೆಚ್.ವಿ, ಡೆಂಟಲ್ ಹೈಜೆನಿಸ್ಟ್, ಆಡಿಯೋ ಮೆಟ್ರಿಕ್ ಆಸಿಸ್ಟೆಂಟ್, ಎಮ್.ಬಿ.ಬಿ.ಎಸ್ ವೈದ್ಯಾಧಿಕಾರಿಗಳು, ಆಯುಷ್ ವೈದ್ಯಾಧಿಕಾರಿಗಳು, ಶುಶ್ರೂಷಕಿ, ಕಿರಿಯ ಪುರುಷ ಆರೋಗ್ಯ ಸಹಾಯಕರು, ಕಿರಿಯ ಮಹಿಳಾ ಆರೋಗ್ಯ ಸಹಾಯಕರು ಹಾಗೂ ಶ್ರವಣ ದೋಷವುಳ್ಳ ಮಕ್ಕಳಿಗೆ ಬೋಧಕೇತರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಆಗಸ್ಟ್ 31ರಂದು ಬೆಳಿಗ್ಗೆ 11 ರಿಂದ 1 ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕು.ಕ. ಕಛೇರಿ ಉಡುಪಿ ಇಲ್ಲಿ ನೇರ ಸಂದರ್ಶನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

 

Exit mobile version