ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಆ.30ರ ಭಾನುವಾರ ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 61, ಉಡುಪಿ ತಾಲೂಕಿನ 145 ಹಾಗೂ ಕಾರ್ಕಳ ತಾಲೂಕಿನ 40 ಮಂದಿಗೆ ಪಾಸಿಟಿವ್ ಬಂದಿದೆ. 8 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ.
ಒಟ್ಟು ಪ್ರಕರಣಗಳಲ್ಲಿ 105 ಸಿಂಥಮೇಟಿವ್ ಹಾಗೂ 149 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 102, ILI 92, ಸಾರಿ 4 ಪ್ರಕರಣವಿದ್ದು, 47 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ. 4 ಮಂದಿ ವ್ಯಕ್ತಿ ಅಂತರ್ಜಿಲ್ಲಾ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ.
ಇಂದು 82 ಮಂದಿ ಆಸ್ಪತ್ರೆಯಿಂದ ಹಾಗೂ 113 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ.
735 ನೆಗೆಟಿವ್:
ಈ ತನಕ ಒಟ್ಟು 71120 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 59367 ನೆಗೆಟಿವ್, 11513 ಪಾಸಿಟಿವ್ ಬಂದಿದ್ದು, 240 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 735 ನೆಗೆಟಿವ್, 254 ಪಾಸಿಟಿವ್ ಬಂದಿದೆ.
2,620 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 11513 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 8798 ಮಂದಿ ಬಿಡುಗಡೆಯಾಗಿದ್ದು, ಒಟ್ಟು 2620 ಸಕ್ರಿಯ ಪ್ರಕರಣಗಳಲ್ಲಿ 1182 ಮಂದಿ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಮೂಲಕ ನಿಗಾದಲ್ಲಿದ್ದಾರೆ ಹಾಗೂ 1438 ಮಂದಿ ಹೋಮ್ ಐಸೋಲೇಶನಿನಲ್ಲಿದ್ದಾರೆ. ಈವರೆಗೆ ಒಟ್ಟು 95 ಮಂದಿ ಮೃತಪಟ್ಟಿದ್ದಾರೆ.

