Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲೆಯ ಕೋವಿಡ್ ಅಪ್ಡೇಟ್: ಶನಿವಾರ 175 ಪಾಸಿಟಿವ್, 1250 ನೆಗೆಟಿವ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಸೆ.5ರ ಶನಿವಾರ 175 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಕುಂದಾಪುರ ತಾಲೂಕಿನ 34, ಉಡುಪಿ ತಾಲೂಕಿನ 106 ಹಾಗೂ ಕಾರ್ಕಳ ತಾಲೂಕಿನ 31 ಮಂದಿಗೆ ಪಾಸಿಟಿವ್ ಬಂದಿದೆ. 4 ಮಂದಿ ಬೇರೆ ಜಿಲ್ಲೆಯವರಾಗಿದ್ದಾರೆ. ಈತನಕ ಜಿಲ್ಲೆಯಲ್ಲಿ ಒಟ್ಟು 112 ಮಂದಿ ಮೃತಪಟಿದ್ದಾರೆ.

ಒಟ್ಟು ಪ್ರಕರಣಗಳಲ್ಲಿ 134 ಸಿಂಥಮೇಟಿವ್ ಹಾಗೂ 41 ಅಸಿಂಥಮೆಟಿಕ್ ಪ್ರಕರಣಗಳಲ್ಲಿದ್ದು, ಒಟ್ಟು ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಿಂದ 65, ILI 61, ಸಾರಿ 0 ಪ್ರಕರಣವಿದ್ದು, 49 ಪ್ರಕರಣದ ಮೂಲ ಪತ್ತೆಹಚ್ಚಲಾಗುತ್ತಿದೆ.

ಇಂದು 68 ಮಂದಿ ಆಸ್ಪತ್ರೆಯಿಂದ ಹಾಗೂ 164 ಮಂದಿ ಹೋಮ್ ಐಸೋಲೇಶನ್’ನಿಂದ ಬಿಡುಗಡೆಗೊಂಡಿದ್ದಾರೆ. ಉಡುಪಿಯ 79, 70 ವರ್ಷದ ವೃದ್ಧೆಯರು 62 ವರ್ಷದ ವೃದ್ಧ, ಕಾರ್ಕಳದ 68 ವರ್ಷದ ವೃದ್ಧ, ಇಂದು ಮೃತಪಟ್ಟಿದ್ದಾರೆ.

1250 ನೆಗೆಟಿವ್:
ಈ ತನಕ ಒಟ್ಟು 76891 ಮಾದರಿ ಸಂಗ್ರಹಿಸಿದ್ದು, ಅವುಗಳಲ್ಲಿ 64123 ನೆಗೆಟಿವ್, 12511 ಪಾಸಿಟಿವ್ ಬಂದಿದ್ದು, 257 ಮಂದಿಯ ವರದಿ ಬರುವುದು ಬಾಕಿ ಇದೆ. ಇಂದು ಬಂದಿರುವ ವರದಿಯಲ್ಲಿ 1250 ನೆಗೆಟಿವ್, 175 ಪಾಸಿಟಿವ್ ಬಂದಿದೆ.

1,906 ಸಕ್ರಿಯ ಪ್ರಕರಣ:
ಜಿಲ್ಲೆಯಲ್ಲಿ ಒಟ್ಟು 12511 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 10493 ಮಂದಿ ಬಿಡುಗಡೆಯಾಗಿದ್ದು, ಒಟ್ಟು 1906 ಸಕ್ರಿಯ ಪ್ರಕರಣಗಳಲ್ಲಿ 964 ಮಂದಿ ಉಡುಪಿ, ಕುಂದಾಪುರ, ಕಾರ್ಕಳದ ಕೋವಿಡ್ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್, ಕೋವಿಡ್ ಹೆಲ್ತ್ ಸೆಂಟರ್ ಮೂಲಕ ನಿಗಾದಲ್ಲಿದ್ದಾರೆ ಹಾಗೂ 942 ಮಂದಿ ಹೋಮ್ ಐಸೋಲೇಶನಿನಲ್ಲಿದ್ದಾರೆ. ಈವರೆಗೆ ಒಟ್ಟು 112 ಮಂದಿ ಮೃತಪಟ್ಟಿದ್ದಾರೆ.

Exit mobile version