Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಆರೋಗ್ಯ ಹಸ್ತ ಕಿಟ್ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿ ಗ್ರಾಮ ಪಂಚಾಯಿತಿಗಳಿಗೆ ಆರೋಗ್ಯ ಹಸ್ತ ಕಿಟ್ ವಿತರಣೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇತ್ತೀಚೆಗೆ ನಡೆಯಿತು.

ಜಿಲ್ಲಾ ಅಧ್ಯಕ್ಷ ಅಶೋಕ ಕುಮಾರ ಕೊಡವೂರು ಚಾಲನೆ ನೀಡಿ, ರಾಜ್ಯದ ಜನತೆ ಕರೊನಾ ಸಂಕಷ್ಟದಲ್ಲಿರುವಾಗ ಸರ್ಕಾರ ಜನತೆಯ ಕಷ್ಟಗಳಿಗೆ ಸ್ಪಂದಿಸದೆ ಆಕ್ರಮ ದಂದೆ ನಡೆಸುತ್ತಿದೆ. ಕಾಂಗ್ರೆಸ್ ಪಕ್ಷ ವಿರೋಧ ಪಕ್ಷದಲ್ಲಿದ್ದರೂ ಜನರಿಗೆ ಸಾಂತ್ವಾನ ಹೇಳಿ ಪ್ರತಿ ಮನೆಗೂ ವೈಧ್ಯಕೀಯ ಮಾರ್ಗದರ್ಶನ ನೀಡುವ ಕೆಲಸವನ್ನು ಆರೋಗ್ಯ ಹಸ್ತದ ಕಾರ್ಯಕ್ರಮದ ಮೂಲಕ ಮುಂದಿನ ದಿನಗಳಲ್ಲಿ ನಡೆಸಲಾಗುವುದು’ ಎಂದರು.

ಬ್ಲಾಕ್ ಅಧ್ಯಕ್ಷ ಕಾನ್ಮಕ್ಕಿ ಹರಿಪ್ರಸಾದ್ ಶೆಟ್ಟಿ ವಹಿಸಿದ್ದರು. ಆರೋಗ್ಯ ಹಸ್ತದ ಸಂಚಾಲಕ ಡಾ. ಸಂದೀಪ, ಮಾಜಿ ಬ್ಲಾಕ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಹಿರಿಯ ಕಾಂಗ್ರೆಸ್ ನಾಯಕ ಕೃಷ್ಣದೇವ ಕಾರಂತ, ರಾಜ್ಯ ಐ.ಟಿ.ಸೆಲ್ ಪ್ರಧಾನಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ, ಯುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ, ಪುರಸಭಾ ಸದಸ್ಯೆಋಆದ ದೇವಕಿ ಸಣ್ಣಯ್ಯ, ಪ್ರಭಾವತಿ ಶೆಟ್ಟಿ, ಲಕ್ಷ್ಮಿ ಭಾಯಿ, ಅಶ್ಪಕ್ ಕೋಟಿ, ಡಿಜಿಟಲ್ ಯೂತ್ ಕಾಂಗ್ರೆಸ್ ಸಂಯೋಜಕ ರೋಶನ್ ಶೆಟ್ಟಿ, ಟ್ಯಾಕ್ಷಿ ಡ್ರೈವರ್ ಎಸೊಷಿಯನ್ ಅಧ್ಯಕ್ಷ ಲಕ್ಷ್ಮಣ ಶೆಟ್ಟಿ ಮುಂತಾದವರು ಇದ್ದರು.

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನೋದ್ ಕ್ರಾಸ್ಟೊ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು ಬ್ಲಾಕ್ ಕಾಂಗ್ರೆಸ್ ಕೋಶಾಧಿಕಾರಿ ನಾರಾಯಣ ಆಚಾರಿ ವಂದಿಸಿದರು.

 

Exit mobile version