Site icon Kundapra.com ಕುಂದಾಪ್ರ ಡಾಟ್ ಕಾಂ

ಹೊಸಾಡು ಗ್ರಾಮ ಪಂಚಾಯತ್‌ಗೆ ಸೇನಾಪುರ ಗ್ರಾಮ ಸೇರ್ಪಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 4ರಂತೆ ಕುಂದಾಪುರ ತಾಲೂಕು ಹೊಸಾಡು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸೇನಾಪುರ ಗ್ರಾಮವನ್ನು ಸೇರ್ಪಡೆಗೊಳಿಸಿ ಅಧಿಸೂಚನೆ ಹೊರಡಿಸಲಾಗಿದೆ.

ಅಧಿಸೂಚನೆಯ ಕುರಿತು ಸಾರ್ವಜನಿಕರು ಮೇಲ್ಮನವಿ ಸಲ್ಲಿಸುವುದಾದಲ್ಲಿ ಪ್ರಾದೇಶಿಕ ಆಯುಕ್ತರು, ಮೈಸೂರು ಇವರಿಗೆ ಅಧಿಸೂಚನೆ ಪ್ರಕಟಿಸಿದ 30 ದಿನಗಳ ಒಳಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version