Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಪೌಷ್ಠಿಕ ಆಹಾರ ಮಾಸಾಚರಣೆ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ, ಗ್ರಾಮ ಪಂಚಾಯತ್ ಗಂಗೊಳ್ಳಿ, ರೋಟರಿ ಕ್ಲಬ್ ಗಂಗೊಳ್ಳಿ ಹಾಗೂ ಕುಂದಾಪುರ ಸೌಹಾರ್ದ ಕ್ರೆಡಿಟ್ ಕೋ.ಆಪರೇಟಿವ್ ಇವರ ಜಂಟಿ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಬುಧವಾರ ಜರಗಿದ ಗ್ರಾಮ ಮಟ್ಟದ ಪೌಷ್ಠಿಕ ಆಹಾರ ಮಾಸಾಚರಣೆ ಕಾರ್ಯಕ್ರಮ ಮತ್ತು ಶಿಶು ಪ್ರದರ್ಶನ ಕಾರ್ಯಕ್ರಮ ನಡೆಯಿತು

ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಕರೋನಾ ವ್ಯಾಪಕವಾಗಿ ಹಬ್ಬುತ್ತಿರುವ ಈ ಸಮಯದಲ್ಲಿ ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳು ವಿಶೇಷ ಜಾಗ್ರತೆ ವಹಿಸಬೇಕು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಕಾಲಕಾಲಕ್ಕೆ ಆರೋಗ್ಯ ತಪಾಸಣೆ ನಡೆಸಿಕೊಳ್ಳಬೇಕು. ಪೌಷ್ಠಿಕ ಆಹಾರ ಸೇವನೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಯಾವುದೇ ರೋಗ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಸಮೀಪದ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಿಂದ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಹೇಳಿದರು.

ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ. ಪೂಜಾರಿ, ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ. ಪುತ್ರನ್, ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಗಿರೀಶ ಕುಲಕರ್ಣಿ, ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷ ಬಿ. ಲಕ್ಷ್ಮೀಕಾಂತ ಮಡಿವಾಳ, ಕುಂದಾಪುರ ಸೌಹಾರ್ದ ಕ್ರೆಡಿಟ್ ಕೋ. ಆಪರೇಟಿವ್‌ನ ಸಿಇಒ ಶಿವಾನಂದ ಪೂಜಾರಿ, ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿ ಶೋಭಾ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗರ್ಭಿಣಿಯರಿಗೆ ಮುಡಿಲು ತುಂಬಿ ಸೀಮಂತ ಕಾರ್ಯಕ್ರಮ ನಡೆಸಲಾಯಿತು.

ವಲಯ ಮೇಲ್ವಿಚಾರಕಿ ರಾಜೇಶ್ವರಿ ಸ್ವಾಗತಿಸಿದರು. ಕುಂದಾಪುರ ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಶ್ವೇತಾ ಎನ್. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಂಜುನಾಥ ಕಾರ್ಯಕ್ರಮ ನಿರ್ವಹಿಸಿದರು. ಗಂಗೊಳ್ಳಿ ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್ ವಂದಿಸಿದರು.

Exit mobile version