ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯನ್ನು ಪ್ರಸಕ್ತ ಸಾಲಿನಿಂದ ಪ್ರಾರಂಭಿಸಲಾಗಿದ್ದು, ಯೋಜನೆಯ ಅನುಷ್ಟಾನಕ್ಕಾಗಿ ಅರ್ಹ ವ್ಯಕ್ತಿಗಳಿಂದ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಗಳು ಜಿಲ್ಲಾ ಮಟ್ಟದ ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗಳಲ್ಲಿ ಲಭ್ಯವಿರುತ್ತವೆ. ಅರ್ಜಿಗಳನ್ನು ಪಡೆಯಲು ಅಕ್ಟೋಬರ್ 16 ಕೊನೆಯ ದಿನ. ಭರ್ತಿ ಮಾಡಿದ ಅರ್ಜಿಯನ್ನು ಜಂಟಿ ಕೃಷಿ ನಿರ್ದೇಶಕರು, ಉಡುಪಿ ಇವರ ಕಚೇರಿಗೆ ಅಕ್ಟೋಬರ್ 23ರ ಒಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು/ ಉಪ ನಿರ್ದೇಶಕರು, ತೋಟಗಾರಿಕೆ ಇಲಾಖೆ, ಉಡುಪಿ ಇವರನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.