ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ದೀವಗಿಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಡೆದ ಲಾರಿ ಹಾಗೂ ಕಾರು ನಡುವಿನ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಹುಬ್ಬಳ್ಳಿ ಕಡೆ ತೆರಳುತ್ತಿದ್ದ ಲಾರಿ ಹಾಗೂ ಬೈಂದೂರು ಕಡೆಗೆ ಬರುತ್ತಿದ್ದ ಕಾರಿನ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮಂಜುನಾಥ ಆಚಾರ್ಯ ಕಾಲ್ತೋಡು (33) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಸಹಪ್ರಯಾಣಿಕ ರವಿಕಾಂತ್ ಆಚಾರ್ಯ (30) ಗಂಭೀರ ಗಾಯಗೊಂಡಿದ್ದು, ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.