Site icon Kundapra.com ಕುಂದಾಪ್ರ ಡಾಟ್ ಕಾಂ

ಜನಜಾಗೃತಿ ಸಮಾವೇಶ ಹಾಗೂ ಗಾಂಧಿ ಸ್ಮೃತಿ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಬೈಂದೂರು ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ, ಜಿಲ್ಲಾ ಜನಜಾಗೃತಿ ವೇದಿಕೆ ಉಡುಪಿ ಜಿಲ್ಲೆ, ಜನಜಾಗೃತಿ ವೇದಿಕೆ ಬೈಂದೂರು ತಾಲೂಕು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಸಹಯೋಗದೊಂದಿಗೆ 151ನೇ ಗಾಂಧಿ ಜಯಂತಿ ಸಂಭ್ರಮಾಚರಣೆ ಪ್ರಯುಕ್ತ ’ಜನಜಾಗೃತಿ ಸಮಾವೇಶ ಹಾಗೂ ಗಾಂಧಿ ಸ್ಮೃತಿ ಕಾರ್ಯಕ್ರಮ’ ನಾಗೂರು ಒಡೆಯರ ಮಠ ಶ್ರೀ ಗೋಪಾಲಕೃಷ್ಣ ಕಲಾ ಮಂದಿರದಲ್ಲಿ ಬೈಂದೂರು ಶಾಸಕ ಬಿ. ಎಂ. ಸುಕುಮಾರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.

ಬೈಂದೂರು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ರಾಜು ದೇವಾಡಿಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜನಜಾಗೃತಿ ವೇದಿಕೆ ಕುಂದಾಪುರ ತಾಲ್ಲೂಕು ಮಾಜಿ ಅಧ್ಯಕ್ಷರು ಬಿ. ಅಪ್ಪಣ್ಣ ಹೆಗ್ಡೆ. ಉಡುಪಿ ಕರಾವಳಿ ಪ್ರಾದೇಶಿಕ ವಿಭಾಗದ ಜನಜಾಗೃತಿ ಯೋಜನಾಧಿಕಾರಿ ನಾಗೇಶ್ ಎನ್. ಪಿ. ದಿಕ್ಸೂಚಿ ಭಾಷಣ ಮಾಡಿದರು. ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ನವೀನ್ ಅಮೀನ್ ಪಾನಮುಕ್ತರಿಗೆ ಅಭಿನಂದನೆ ಸಲ್ಲಿಸಿದರು.

ಉಡುಪಿ ಜಿಲ್ಲೆಯ ಹಿರಿಯ ನಿರ್ದೇಶಕ ಗಣೇಶ್ ಬಿ., ದಕ್ಷಿಣ ಕನ್ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷ ಎಸ್. ಪ್ರಕಾಶ್‌ಚಂದ್ರ ಶೆಟ್ಟಿ,  ಒಡೆಯರ ಮಠ ಶ್ರೀ ಗೋಪಾಲ ಕೃಷ್ಣ ಕಲಾ ಮಂದಿರದ ಮಾಲಕ ಮಂಜುನಾಥ ಉಡುಪ, ಜಿಲ್ಲಾ ಪಂಚಾಯಿತಿ ಸದಸ್ಯೆ ಗೌರಿ ದೇವಾಡಿಗ, ತಾಪಂ ಸದಸ್ಯೆ ಶ್ಯಾಮಲಾ ಕುಂದರ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಲಲಿತಾ ಖಾರ್ವಿ, ಪ್ರಗತಿ ಬಂದು ಸ್ವ ಸಹಾಯ ಸಂಘದ ಕೇಂದ್ರ ಒಕ್ಕೂಟದ ಅಧ್ಯಕ್ಷ ರಘುರಾಮ್ ಕೆ. ಪೂಜಾರಿ, ವಲಯ ಅಧ್ಯಕ್ಷೆ ವೀಣಾ ಆಚಾರ್ಯ, ಜನಜಾಗೃತಿ ವೇದಿಕೆಯ ವಿವಿಧ ವಲಯಗಳ ಅಧ್ಯಕ್ಷರು ಮತ್ತಿತರರು ಉಪಸ್ಥಿತರಿದ್ದರು.

ತಾಲ್ಲೂಕು ಯೋಜನಾಧಿಕಾರಿ  ಶಶಿರೇಖಾ ಪಿ. ಸ್ವಾಗತಿಸಿದರು.  ಜ್ಞಾನವಿಕಾಸ ಸಮನ್ವಧಿಕಾರಿ ಗೀತಾ ಕಾರ್ಯಕ್ರಮ ನಿರ್ವಹಿಸಿದರು. ಮೇಲ್ವಿಚಾರಕಿ ರುಕ್ಮಿಣಿ ವಂದಿಸಿದರು.

Exit mobile version