Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ: ರಾಜ್ಯದಲ್ಲೇ ಅತೀ ಕಡಿಮೆ ಕೋವಿಡ್ ಮರಣ – ಜಿಲ್ಲಾಧಿಕಾರಿ ಜಿ.ಜಗದೀಶ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೋವಿಡ್ 19 ನಿಂದ ಜಿಲ್ಲೆಯಲ್ಲಿ ಮರಣ ಹೊಂದಿರುವವರ ಪ್ರಮಾಣ ಅತ್ಯಂತ ಕಡಿಮೆಯಾಗಿದ್ದು, ಇಡೀ ರಾಜ್ಯದಲ್ಲಿ ಈ ಸಾಧನೆ ಮಾಡಿರುವ 3 ಜಿಲ್ಲೆಗಳಲ್ಲಿ ಉಡುಪಿ ಒಂದಾಗಿದೆ, ಆದರೆ ಉಳಿದ 2 ಜಿಲ್ಲೆಗಳಲ್ಲಿ ಅತ್ಯಂತ ವಿಷಮ ಪರಿಸ್ಥಿತಿಯಲ್ಲಿ, ಸಾವಿನ ದವಡೆಯಲ್ಲಿದ್ದ ರೋಗಿಗಳನ್ನು , ಬೇರೆಡೆ ಸ್ಥಳಾಂತರಿಸಿ ಚಿಕಿತ್ಸೆ ನೀಡಿದ್ದು, ಉಡುಪಿ ಜಿಲ್ಲೆಯಲ್ಲಿ ಅಂತಹ ರೋಗಿಗಳಿಗೆ , ಇಲ್ಲೇ ಚಿಕಿತ್ಸೆ ನೀಡಿ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದೇವೆ, ಇದಕ್ಕೆ ಮುಖ್ಯ ಮುಖ್ಯ ಕಾರಣ ಜಿಲ್ಲೆಯ ಕೋವಿಡ್ ಫ್ರಂಟ್ಲೈನ್ ವಾರಿರ್ಯ ಸ್ ಗಳು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಉಡುಪಿಯ ಶಾಮಿಲಿ ಸಭಾಂಗಣದಲ್ಲಿ , ಜಿಲ್ಲೆಯ ಕೋವಿಡ್ ಫ್ರಂಟ್ ಲೈನ್ ವಾರಿರ್ಯಸ್ ಗಳು ತಮ್ಮ ಕ್ಷೇತ್ರಗಳಲ್ಲಿ ಯಾವುದೇ ಒತ್ತಡಗಳಿಗೆ ಒಳಗಾಗದೇ, ಮನೋಸ್ಥೆರ್ಯದಿಂದ ಕೆಲಸ ನಿರ್ವಹಿಸುವ ಕುರಿತು ಜಿಲ್ಲಾಡಳಿತದಿಂದ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು.

ಸ್ವಾತಂತ್ರ್ಯ ದಿನಾಚರಣೆ ದಿನ ಅನಾರೋಗ್ಯದ ಕಾರಣ , ಕೋವಿಡ್ ವಿರುದ್ದ ಹೋರಾಟದಲ್ಲಿ ಕಾರ್ಯ ನಿರ್ವಹಿಸಿದ ಸಾಧಕರಿಗೆ ಜಿಲ್ಲಾಡಳಿತ ನೀಡಿದ ಪ್ರಶಸ್ತಿ ಸ್ವೀಕರಿಸದ, ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಡಾ. ಪ್ರಶಾಂತ ಭಟ್ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಜಿಲ್ಲೆಯಲ್ಲಿ ಕೋವಿಡ್ ಫ್ರಂಟ್ ಲೈನ್ ವಾರಿರ್ಯ ಸ್ ಗಳು , ಸರ್ಕಾರಿ ವೈದ್ಯರು , ಆರೋಗ್ಯ ಇಲಾಖೆಯ ಅಧಿಕಾರಿಗಳು,ವಿವಿಧ ಇಲಾಖೆಯ ಅಧಿಕಾರಿಗಳು , ಜಿಲ್ಲಾ ಎಕ್ಸ್ಪರ್ಟ್ ತಂಡದ ವೈದ್ಯರುಗಳು , ತಹಸೀಲ್ದಾರ್ ಗಳು, ಕಾರ್ಯ ನಿರ್ವಹಣಾಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದು, ತಮಗೆ ವಹಿಸಲಾದ ಜವಾಬ್ದಾರಿಗಳನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿ, ರೋಗಿಗಳ ಜೀವ ಉಳಿಸಲು ಆದ್ಯತೆ ನೀಡಿದ್ದರಿಂದ , ಜಿಲ್ಲೆಯಲ್ಲಿ ಕೋವಿಡ್ ಮರಣ ಪ್ರಮಾಣ ಕಡಿಮೆಯಾಗಿದೆ, ಇದಕ್ಕೆ ಇವರೆಲ್ಲರ ಪರಿಶ್ರಮವೇ ಕಾರಣ, ಅಲ್ಲದೇ ಕೊರೋನಾ ವಾರಿರ್ಯ ಸ್ಗಳ ಸುರಕ್ಷತೆಗೆ ಸಹ ಹೆಚ್ಚಿನ ಮುಂಜಾಗ್ರತೆ ವಹಿಸಿದ್ದು, ಇದುವರೆಗೆ ಕೊರೋನಾ ವಾರಿರ್ಯಸ್ಗಳ ಮರಣ ಹೊಂದಿಲ್ಲ. ಖಾಸಗಿ ಆಸ್ಪತ್ರೆಗಳ ಸಹಕಾರ ಉತ್ತಮವಾಗಿದ್ದು, ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರೆಯುತ್ತಿದೆ ಎಂದು ಹೇಳಿದರು.

ಕೋವಿಡ್ ಆರಂಭದಿ0ದಲೂ ಲಾಕ್ ಡೌನ್, ಲಾಕ್ ಡೌನ್ ತೆರವು, ಹೊರ ದೇಶ, ರಾಜ್ಯಗಳಿಂದ ಬಂದ ಪ್ರಯಾಣಿಕರನ್ನು ಕ್ವಾರಂಟೈನ್ ಗೆ ಒಳಪಡಿಸುವುದು, ಅವರ ಆರೋಗ್ಯ ತಪಾಸಣೆ, ವಲಸೆ ಕಾರ್ಮಿಕರ ಸುರಕ್ಷತೆ ಈ ಎಲ್ಲಾ ಸಮಸ್ಯೆಗಳನ್ನ್ಲು ಅತ್ಯಂತ ಶಿಸ್ತಿನಿಂದ , ದೈರ್ಯದಿಂದ ಎದುರಿಸಿದ್ದೇವೆ, ಹಲವು ಸಂದರ್ಭದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ ನಡೆದರೂ ಸಹ , ಟೀಕೆಗಳಿಗೆ ವಿಚಲಿತರಾಗದೇ ಕೆಲಸ ಮಾಡಿರುವುದರಿಂದ , ಪ್ರಸ್ತುತ ಕೋವಿಡ್ ಲಕ್ಷಣಗಳಿರುವ ರೋಗಿಗಳ ಸಂಖ್ಯೆ ಕಡಿಮೆಯಾಗಿದೆ, ತೀರ ವಿಷಮ ಪರಿಸ್ಥಿತಿಯಲ್ಲಿರುವ ರೋಗಿಗಳ ಸಂಖ್ಯೆ ಸಹ ಕಡಿಮೆಯಾಗಿದೆ, ಜಿಲ್ಲಾಡಳಿತಕ್ಕೆ ಅತ್ಯಂತ ಕಷ್ಟಕರವಾಗಿದ್ದ ಕಾರ್ಯಗಳನ್ನು ಎಲ್ಲಾ ಅಧಿಕಾರಿ/ಸಿಬ್ಬಂದಿಗಳ ಸಹಕಾರದಿಂದ ಯಶಸ್ವಿಯಾಗಿ ನಿಭಾಯಿಸಲಾಗಿದೆ , ಕೊರೋನ ಸಂಕಷ್ಟ ಕಾಲದಲ್ಲೂ ಸಹ ಸಾರ್ವಜನಿಕರಿಗೆ ಅಗತ್ಯವಿರುವ ಸೇವೆಗಳನ್ನು ಒದಗಿಸುತ್ತಿದ್ದು, ಕಂದಾಯ ಇಲಾಖೆಯ ಸೇವೆಗಳನ್ನು ನೀಡುವಲ್ಲಿ ಕಳೆದ 12 ತಿಂಗಳಿ0ದ ರಾಜ್ಯದಲ್ಲೇ ಉಡುಪಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಮಾಹೆಯ ಉಪ ಕುಲಪತಿ ಲೆ . ಜನರಲ್ ಡಾ.ವೆಂಕಟೇಶ್, ರೋ .ಅಭಿನಂದನ ಶೆಟ್ಟಿ ಜಿಲ್ಲೆಯಲ್ಲಿ ಕೋವಿಡ್ ಫ್ರಂಟ್ಲೈನ್ ವಾರಿರ್ಯಸ್ ಗಳು ಆಸ್ಮಸ್ಥ್ಯರ್ಯ ಯಾವುದೇ ಸಂದರ್ಭದಲ್ಲಿ ಸವಾಲುಗಳಿಗೆ ದೃತಿಗೆಡದೇ , ಕಾರ್ಯನಿರ್ವಹಿಸುವ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಡಿ. ಹೆಚ್. ಓ. ಡಾ. ಸುಧೀರ್ ಚಂದ್ರ ಸೂಡಾ, ಕೆಎಂಸಿ ಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ್ ಶೆಟ್ಟಿ ಉಪಸ್ಥಿತರಿದ್ದರು.

ಜಿಲ್ಲಾ ಕೋವಿಡ್ ನೋಡೆಲ್ ಅಧಿಕಾರಿ ಡಾ. ಪ್ರಶಾಂತ ಭಟ್ ಸ್ವಾಗತಿಸಿದರು, ಡಾ. ಪ್ರೇಮಾನಂದ್ ವಂದಿಸಿದರು.

Exit mobile version