Kundapra.com ಕುಂದಾಪ್ರ ಡಾಟ್ ಕಾಂ

ಕಾರಂತರ ಬದುಕೇ ಒಂದು ಸಂದೇಶ: ವಸಂತ್ ಗಿಳಿಯಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಕಾರಂತ ಟ್ರಸ್ಟ್ ಉಡುಪಿ, ಯು – ಚಾನೆಲ್ ಸಹಯೋಗದಲ್ಲಿ ನಡೆಯುತ್ತಿರುವ ಡಾ. ಶಿವರಾಮ ಕಾರಂತ ಜನ್ಮ ದಿನೋತ್ಸವ ಹಾಗೂ ಹುಟ್ಟೂರ ಪ್ರಶಸ್ತಿಗೆ 16ನೇ ವರ್ಷದ ಸಂಭ್ರಮದ ಅಂಗವಾಗಿ ನಡೆಯುತ್ತಿರುವ ಸಾಹಿತ್ಯಿಕ – ಸಾಂಸ್ಕೃತಿಕ ಸುಗ್ಗಿ ಆಲ್ಮೋರ – 2020 ಮರೆಯಲಾಗದ ಶಬ್ಧತೀರ ಮೂರನೇ ದಿನದ ಕಾರಂತ ಚಿಂತನ ಕಾರ್ಯಕ್ರಮ ನಡೆಯಿತು

ಕಾರ್ಯಕ್ರಮದಲ್ಲಿ ಪತ್ರಕರ್ತ ವಸಂತ್ ಗಿಳಿಯಾರು ಮಾತನಾಡಿ, ಕಾರಂತರ ಬದುಕೇ ಒಂದು ಸಂದೇಶವಾಗಿದ್ದು, ನುಡಿದಂತೆ ನಡೆದ ವ್ಯಕ್ತಿತ್ವ ಅವರಾಗಿದ್ದು ತಮ್ಮ ಬರವಣಿಗೆಯಲ್ಲಿ ಹೇಗೆ ಪ್ರತಿಭಟನೆ, ಚಳುವಳಿ, ಅನ್ಯಾಯದ ವಿರುದ್ಧ ಧ್ವನಿಗೂಡಿಸಿದ್ದಾರೊ ಅದರಂತೆ ವಾಸ್ತವ ಬದುಕಿನಲ್ಲಿ ಹಾಗೆ ಬದುಕಿ ತೋರಿಸಿದ ಕಾರಂತರ ಜೀವನ ಶೈಲಿ ಪ್ರಸ್ತುತ ಸಮಾಜಕ್ಕೆ ಆದರ್ಶ ಎಂದು ಹೇಳಿದರು.

ಕಾರಂತ ಚಿಂತನ ಕಾರ್ಯಕ್ರಮದ ಬಳಿಕ ಈಶ್ಯಲಾಸ್ಯ ಸಾಲಿಗ್ರಾಮ ಇವರಿಂದ ನೃತ್ಯ ಸಂಗಮ ನೃತ್ಯ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಕಾರಂತ ಥೀಮ್ ಪಾರ್ಕ್ ಮೇಲ್ವಿಚಾರಕ ಪ್ರಶಾಂತ್ ನಿರೂಪಿಸಿ ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಸ್ವಾಗತಿಸಿ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ ಅವರು ವಂದಿಸಿದರು.

Exit mobile version