Kundapra.com ಕುಂದಾಪ್ರ ಡಾಟ್ ಕಾಂ

ಕಾರಂತರ ಸಮಯಪ್ರಜ್ಞೆ, ಶಿಸ್ತು ಅನುಕರಣೀಯ: ಸುಜಯೀಂದ್ರ ಹಂದೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಕಾರಂತ ಟ್ರಸ್ಟ್ ಉಡುಪಿ, ಯು – ಚಾನೆಲ್ ಸಹಯೋಗದಲ್ಲಿ ನಡೆಯುತ್ತಿರುವ ಡಾ. ಶಿವರಾಮ ಕಾರಂತ ಜನ್ಮ ದಿನೋತ್ಸವ ಹಾಗೂ ಹುಟ್ಟೂರ ಪ್ರಶಸ್ತಿಗೆ 16ನೇ ವರ್ಷದ ಸಂಭ್ರಮದ ಅಂಗವಾಗಿ ನಡೆಯುತ್ತಿರುವ ಸಾಹಿತ್ಯಿಕ – ಸಾಂಸ್ಕೃತಿಕ ಸುಗ್ಗಿ ಆಲ್ಮೋರ – 2020 ಮರೆಯಲಾಗದ ಶಬ್ಧತೀರ ಕಾರ್ಯಕ್ರಮದ ಆರನೇ ದಿನದ  ಕಾರಂತ ಚಿಂತನ ಮಂತನ ಕಾರ್ಯಕ್ರಮ ನಡೆಯಿತು.

ಉಪನ್ಯಾಸಕ, ಕಲಾವಿದ ಸುಜಯೀಂದ್ರ ಹಂದೆ ಮಾತನಾಡಿ, ಕಾರಂತರರು ಕಲಾವಿದರಾಗಿ, ಸಾಹಿತಿಯಾಗಿ ಜೀವನದಲ್ಲಿ ಅಳವಡಿಸಿಕೊಂಡಿರುವ ಶಿಸ್ತು, ಸಮಯಪ್ರಜ್ಞೆ ನಮಗೆಲ್ಲ ಮಾದರಿಯಾಗಿದ್ದು, ಅವರು ಯಕ್ಷಗಾನದಲ್ಲಿ ಹಲವಾರು ಪ್ರಯೋಗ ಮಾಡಿ ಯಕ್ಷಗಾನ ಶ್ರೀಮಂತಗೊಳಿಸಿದ ಕಾರಂತರು ಅವರ ಕಾದಂಬರಿಯಲ್ಲಿ ಹಾಗೂ ನಿಜ ಜೀವನದಲ್ಲಿ ಅಳವಡಿಸಿಕೊಂಡಿರುವ ಪರಿಸರದ ಮೇಲಿರುವ ವಿಶೇಷ ಕಾಳಜಿ ನಮಗೆಲ್ಲಾ ಅನುಕರಣೀಯ ಎಂದು ತಿಳಿಸಿದರು.

ಕಾರಂತ ಚಿಂತನ ಕಾರ್ಯಕ್ರಮದ ಬಳಿಕ ಸಾನಿಧ್ಯ ಮೆಲೋಡಿಸ್ ,ಹವರಾಲು ಇವರಿಂದ ಸಂಗೀತ ಸುಗಂಧ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಕೋಟತಟ್ಟು ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕಿ ಶೈಲಜಾ ಕೆ. ಎನ್ ನಿರೂಪಿಸಿ ಕಾರಂತ ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಸ್ವಾಗತಿಸಿ ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ ವಂದಿಸಿದರು.

Exit mobile version