Site icon Kundapra.com ಕುಂದಾಪ್ರ ಡಾಟ್ ಕಾಂ

ನೀಟ್ ಪರೀಕ್ಷೆಯಲ್ಲಿ ಕುಂದಾಪುರ ವೆಂಕಟರಮಣ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಪ್ಟೆಂಬರ್ 2020 ರಾಷ್ಟ್ರಮಟ್ಟದಲ್ಲಿ ಜರುಗಿದ ನೀಟ್ ಪರೀಕ್ಷೆಯಲ್ಲಿ ಕುಂದಾಪುರ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಲಭ್ಯವಿರುವ ನೀಟ್ ಕೋಚಿಂಗ್‌ನ ಸದುಪಯೋಗವನ್ನು ಪಡೆದುಕೊಂಡು ಉತ್ತೀರ್ಣರಾಗಿದ್ದಾರೆ.

ಸಾಧನೆ ಮೆರೆದ ವಿದ್ಯಾರ್ಥಿಗಳನ್ನು ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ನ ಆಡಳಿತ ಮಂಡಳಿ, ಕಾಲೇಜು ಪ್ರಾಂಶುಪಾಲರು ಹಾಗೂ ಉಪನ್ಯಾಸಕವೃಂದ ಅಭಿನಂದಿಸಿದ್ದಾರೆ.

Exit mobile version