ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಇಲ್ಲಿನ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ವತಿಯಿಂದ ಗಂಗೊಳ್ಳಿಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘದ ಪರವಾಗಿ ಅಧ್ಯಕ್ಷ ಚಿಕ್ಕಯ್ಯ ಮೊಗವೀರ ಅವರನ್ನು ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಪುರೋಹಿತರಾದ ವೇದಮೂರ್ತಿ ಜಿ. ರಾಘವೇಂದ್ರ ಆಚಾರ್ಯ, ಸಮಿತಿಯ ಅಧ್ಯಕ್ಷ ಸತೀಶ ಜಿ., ಗೌರವಾಧ್ಯಕ್ಷ ವೇದಮೂರ್ತಿ ಜಿ. ನಾರಾಯಣ ಆಚಾರ್ಯ, ಪ್ರಧಾನ ಕಾರ್ಯದರ್ಶಿ ರವೀಂದ್ರ ಪಟೇಲ್, ಕಾರ್ಯದರ್ಶಿ ಗೋಪಾಲ ಖಾರ್ವಿ ದಾವನಮನೆ, ಉಪಾಧ್ಯಕ್ಷ ಗೋಪಾಲ ಚಂದನ್, ಸಮಿತಿಯ ಪದಾಧಿಕಾರಿಗಳು, ಮಹಿಳಾ ಮಂಡಳಿ ಕಾರ್ಯದರ್ಶಿ ಸ್ವಾತಿ ಮಡಿವಾಳ, ಸಮಿತಿ ಪದಾಧಿಕಾರಿಗಳು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಸಂಘದ ಸದಸ್ಯರು, ಸ್ಥಳೀಯರು, ಮತ್ತಿತರರು ಉಪಸ್ಥಿತರಿದ್ದರು.

