ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಅಜ್ಜರಕಾಡು ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಪ್ರಸಕ್ತ ಸಾಲಿನ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಎಂ. ಎ (ಇತಿಹಾಸ), ಎಂ. ಎ ( ರಾಜ್ಯಶಾಸ್ತ್ರ), ಎಂ. ಕಾಂ, ಎಂ. ಎಸ್ಸಿ (ಗಣಿತ), ಎಂ. ಎಸ್ಸಿ ( ರಸಾಯನಶಾಸ್ತ್ರ) ಕೋರ್ಸುಗಳು ಲಭ್ಯವಿದೆ.
ಅರ್ಜಿ ಸಲ್ಲಿಸಲು ನವೆಂಬರ್ 16 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820 -2527955, ಮೊ. ನಂ. 9449969818 ಸಂಪರ್ಕಿಸುವಂತೆ ಕಾಲೇಜಿನ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.