Kundapra.com ಕುಂದಾಪ್ರ ಡಾಟ್ ಕಾಂ

ಶಿಕ್ಷಕ ಸಮುದಾಯದ ಮೇಲೆ ಕೋವಿಡ್ – 19 ಬೀರಿದ ಪರಿಣಾಮಗಳು ಮತ್ತು ಸವಾಲುಗಳು: ವೆಬಿನಾರ್

ಕುಂದಾಪ್ರ ಡಾಟ್ ಕಾಂ
ಕುಂದಾಪುರ: ಇಲ್ಲಿನ ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಂತರಿಕ ಗುಣಮಟ್ಟದ ಭರವಸೆ ಕೋಶ ಐಕ್ಯೂಎಸಿ ಆಯೋಜಿಸಿದ ಶಿಕ್ಷಕ ಸಮುದಾಯದ ಮೇಲೆ ಕೋವಿಡ್-19 ಬೀರಿದ ಪರಿಣಾಮಗಳು ಮತ್ತು ಸವಾಲುಗಳು ಎಂಬ ವಿಷಯದ ಕುರಿತು ಆಯೋಜಿಸಿದ ರಾಷ್ಟ್ರ ಮಟ್ಟದ ವೆಬಿನಾರ್ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ, ಚಿಂತಕ ಡಾ. ಪುರುಷೋತ್ತಮ ಬಿಳಿಮಲೆ ಮಾತನಾಡಿ, ಕೋವಿಡ್ – 19ನಿಂದಾಗಿ ಇಡೀ ಶಿಕ್ಷಣ ವ್ಯವಸ್ಥೆಗೆ ದೊಡ್ಡ ಮಟ್ಟದ ಪೆಟ್ಟು ಬಿದ್ದಿದೆ. ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಆನ್‌ಲೈನ್ ತರಗತಿಗಳನ್ನು ನಡೆಸುವುದು ತುಂಬಾ ಕಷ್ಟಕರವಾಗಿದೆ. ಕರೋನದಿಂದಾಗಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ನಡುವೆ ಸಂವಹನ ನಡೆಸಲು ಕಷ್ಟವಾಗುತ್ತಿದೆ. ಅದೆಷ್ಟೋ ಶಿಕ್ಷಕರು ಕೋವಿಡ್‌ನಿಂದಾಗಿ ಉದ್ಯೋಗ ಕಳೆದುಕೊಂಡಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ – ರಾಜ್ಯ ಸರ್ಕಾರಗಳು ಶಿಕ್ಷಕ ಮತ್ತು ವಿದ್ಯಾರ್ಥಿ ಸಮುದಾಯಗಳ ಶೈಕ್ಷಣಿಕ ಅಗತ್ಯಗಳಿಗೆ ಶೀಘ್ರ ಸ್ಪಂದಿಸಬೇಕು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ವಿಚಾರಣ ಸಂಕಿರಣವನ್ನು ಉದ್ಘಾಟಿಸಿ ಸ್ವಾಗತಿಸಿದರು. ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು. ಐಕ್ಯೂಎಸಿ ಸಂಯೋಜಕಿ, ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಸ್ಫೂರ್ತಿ ಎಸ್. ಫೆರ್ನಾಂಡಿಸ್ ಕಾರ್ಯಕ್ರಮವನ್ನು ಸಂಯೋಜಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೀಣಾ ವಾಸುದೇವ ಭಟ್ ಸಂಪನ್ಮೂಲ ವ್ಯಕ್ತಿಯನ್ನು ಪರಿಚಯಿಸಿದರು. ಅರ್ಥಶಾಸ್ತ್ರ ವಿಭಾಗದ ಮುಖಸ್ಥರಾದ ಸುಧಾಕರ್ ಪಾರಂಪಳ್ಳಿ ವಂದಿಸಿದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಶೈಲೇಶ್ ಬಿ .ಸಿ. ತಾಂತ್ರಿಕ ಸಂಯೋಜಕರಾಗಿ ಕಾರ್ಯನಿರ್ವಹಿಸಿದರು. ಸಾರ್ವಜನಿಕ ಸಂಪರ್ಕ ಅಧಿಕಾರಿ ರಕ್ಷಿತ್ ರಾವ್ ಕಾರ್ಯಕ್ರಮ ನಿರೂಪಿಸಿದರು. ವೆಬಿನಾರ್‌ನಲ್ಲಿ ಸುಮಾರು100ಕ್ಕೂ ಮಿಕ್ಕಿ ಶಿಕ್ಷಕರು ದೇಶದ ಬೇರೆ ಬೇರೆ ಭಾಗಗಳಿಂದ ಭಾಗವಹಿಸಿದ್ದರು.

Exit mobile version