ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಗಾಂಧಿ ಮೈದಾನದಲ್ಲಿ ಭಾನುವಾರ ತಾಲ್ಲೂಕು ಆಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು
ಧ್ವಜಾರೋಹಣ ಮಾಡಿ ಮಾತನಾಡಿದ ಕುಂದಾಪುರ ಉಪವಿಭಾಗಾಧಿಕಾರಿ ಕೆ.ರಾಜು, ಎಲ್ಲ ಭಾಷೆಗಳನ್ನು ಪ್ರೀತಿಸುವ ಜತೆ ಮಾತೃ ಭಾಷೆಯನ್ನು ರಕ್ಷಿಸುವ ಬದ್ಧತೆಯನ್ನು ಕನ್ನಡ ನಾಡು ಹೊಂದಿದೆ’. ಆಚರಣೆ, ಸಂಸ್ಕೃತಿ, ಪರಂಪರೆ, ಆಹಾರ ಹಾಗೂ ಭಾಷಾ ಸೊಗಡಿನಲ್ಲಿ ವಿಭಿನ್ನತೆ ಇದ್ದರೂ, ನಮ್ಮೆಲ್ಲರ ಹೃದಯ ಭಾಷೆ ಕನ್ನಡ ಒಂದೇ ಆಗಿದೆ. ಜನಪದ, ಜಾನಪದವನ್ನು ಉಳಿಸಿ ಬೆಳೆಸಬೇಕಿದೆ’ ಎಂದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಎಚ್.ಇಂದಿರಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಸದಸ್ಯರಾದ ದೇವಕಿ ಪಿ. ಸಣ್ಣಯ್ಯ, ಪ್ರಭಾಕರ್ ವಿ, ಶ್ರೀಧರ ಶೇರೆಗಾರ್, ಮಾಜಿ ಉಪಾಧ್ಯಕ್ಷ ರಾಜೇಶ್ ಕಾವೇರಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ ವರ್ಣಿಕರ್, ತಾಲ್ಲೂಕು ಯುವಜನ ಸೇವಾ ಮತ್ತು ಕ್ರೀಡಾಕಾರಿ ಕುಸುಮಾಕರ್ ಶೆಟ್ಟಿ ಇದ್ದರು.