Kundapra.com ಕುಂದಾಪ್ರ ಡಾಟ್ ಕಾಂ

ಶಿಷ್ಯವೇತನಕ್ಕಾಗಿ ಅರ್ಜಿ- ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ನೃತ್ಯ, ಸುಗಮ ಸಂಗೀತ, ಕಥಾಕೀರ್ತನ ಮತ್ತು ಗಮಕ ಕಲಾಕ್ಷೇತ್ರಗಳಲ್ಲಿ ಅಭ್ಯಾಸ ಮಾಡುತ್ತಿರುವ 16 ರಿಂದ 24ವರ್ಷದ ಒಳಗಿನ ಅಭ್ಯರ್ಥಿಗಳಿಂದ ಪ್ರಸಕ್ತ ಸಾಲಿನ ಶಿಷ್ಯ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಅಕಾಡೆಮಿಯಲ್ಲಿ ಹಾಗೂ ಅಕಾಡೆಮಿಯ ವೆಬ್‌ಸೈಟ್ https://karnatakasangeetanrityaacademy.com ಅಥವಾ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು.

ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 30 ರ ಒಳಗೆ ರಿಜಿಸ್ಟಾರ್ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, ಕನ್ನಡ ಭವನ, ಜೆ.ಸಿ ರಸ್ತೆ, ಬೆಂಗಳೂರು ಇಲ್ಲಿಗೆ ಕಳುಹಿಸುವಂತೆ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ರಿಜಿಸ್ಟಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Exit mobile version