Kundapra.com ಕುಂದಾಪ್ರ ಡಾಟ್ ಕಾಂ

ಮಕ್ಕಳ ಆಸಕ್ತಿ ಕ್ಷೇತ್ರಗಳಿಗೆ ಪೋಷಕರ ಪ್ರೋತ್ಸಾಹ ಅಗತ್ಯ: ನೀಲಾವರ ಸುರೇಂದ್ರ ಅಡಿಗ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಇವರ ಸಹಯೋಗದಲ್ಲಿ ನಡೆಯುತ್ತಿರುವ ವಾರಾಂತ್ಯ ಉಪನ್ಯಾಸ ಮಾಲಿಕೆ ವಿಚಾರ ಸಂಕಿರಣ ವಿಚಾರಗೋಷ್ಠಿ ಸಾಂಸ್ಕೃತಿಕ ಚಿತ್ತಾರ ಕಾರ್ಯಕ್ರಮದಲ್ಲಿ ಸಾಹಿತ್ಯ ಪ್ರೇರಣೆ ವಿಷಯದ ಬಗ್ಗೆ ಉಪನ್ಯಾಸ ನಡೆಯಿತು.

ಉಪನ್ಯಾಸದಲ್ಲಿ ಮಾತನಾಡಿದ ಉಡುಪಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಮಕ್ಕಳು ಚಿಕ್ಕವರಿದ್ದಾಗ ಅವರ ಆಸಕ್ತಿ ಕ್ಷೇತ್ರವನ್ನು ಗುರುತಿಸಿ ಅದರಂತೆ ಪ್ರೋತ್ಸಾಹ ನೀಡಿದಾಗ ಮಕ್ಕಳು ಬದುಕಿನಲ್ಲಿ ಏನಾದರೂ ಸಾಧಿಸೋಕೆ ಸಾಧ್ಯ. ಮಕ್ಕಳಲ್ಲಿ ಸಕರಾತ್ಮಕ ವಿಷಯಗಳನ್ನು ಯೋಚಿಸುವ ಗುಣಗಳನ್ನು ಬೆಳೆಸುವುದು ಪೋಷಕರ ಹಾಗೂ ಶಿಕ್ಷಕರ ಕೆಲಸ ಅದನ್ನು ಚಿಕ್ಕ ಮಕ್ಕಳಿರುವಾಗಲೇ ಪ್ರೇರೆಪಿಸಿದಾಗ ಮಕ್ಕಳು ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಪ್ರತಿಷ್ಠಾನದ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ನಿರೂಪಿಸಿ, ಕಾರಂತ ಥೀಮ್ ಪಾರ್ಕ್ ವಿಶೇಷ ಕರ್ತಾವ್ಯಾಧಿಕಾರಿ ಪೂರ್ಣಿಮಾ ಸ್ವಾಗತಿಸಿ, ಟ್ರಸ್ಟಿ ಸತೀಶ್ ವಡ್ಡರ್ಸೆ ವಂದಿಸಿದರು.

Exit mobile version