Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕ ಎಸಿಬಿ ಬಲೆಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜಾಗದ ಕನ್ವರ್ಶನ್ ಮಾಡಿಕೊಡಲು ವ್ಯಕ್ತಿಯೋರ್ವರ ಬಳಿ ಲಂಚಕ್ಕಾಗಿ ಬೇಡಿಕೆಯಿಟ್ಟಿದ್ದ ಕಂದಾಯ ಇಲಾಖೆಯ ಅಧಿಕಾರಿ, ಎಸಿಬಿ ಅಧಿಕಾರಿಗಳಿಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಗುರುವಾರ ನಡೆದಿದೆ. ಕುಂದಾಪುರ ಕಂದಾಯ ಇಲಾಖೆಯ ಕಂದಾಯ ನಿರೀಕ್ಷಕ ಭರತ್ ವಿ. ಶೆಟ್ಟಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಸಿಕ್ಕಿಬಿದ್ದ ಅಧಿಕಾರಿ.

ಈತ ಖಾಸಗಿ ವ್ಯಕ್ತಿಯೋರ್ವರಿಂದ ಜಾಗದ ಕನ್ವರ್ಶನ್ ಮಾಡಿಕೊಡಲು ರೂ.೧೨೦೦೦ ಬೇಡಿಕೆ ಇಟ್ಟಿದ್ದ. ಈ ಬಗ್ಗೆ ಎಸಿಬಿಗೆ ದೂರು ನೀಡಿದ್ದರು. ಅದರಂತೆಯೇ ಇಂದು ಕಾರ್ಯಾಚರಣೆ ನಡೆಸಿದ್ದು, ರೂ. ೫೦೦೦ ಲಂಚ ಸ್ವೀಕರಿಸುತ್ತಿರುವಾಗಲೇ ಭರತ್ ಶೆಟ್ಟಿ ಸಿಕ್ಕಿಬಿದ್ದಿದ್ದು, ವಿಚಾರಣೆ ನಡೆಸಿ ಬಂಧಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಎಸಿಬಿ ಉಡುಪಿ ಡಿವೈಎಸ್ಪಿ ಮಂಜುನಾಥ ಕವರಿ, ಇನ್ಸ್‌ಪೆಕ್ಟರ್ ಸತೀಶ್ ಬಿ.ಎಸ್., ಚಂದ್ರಕಲಾ, ಎಸಿಬಿ ಸಿಬ್ಬಂದಿಗಳಾದ ಯತೀನ್ ಕುಮಾರ್, ಪ್ರಸನ್ನ, ರವೀಂದ್ರ ಗಾಣಿಗ, ಅಬ್ದುಲ್ ಜಲಲ್, ರಾಘವೇಂದ್ರ ಹೊಸ್ಕೋಟೆ, ಸೂರಜ್, ಅಬ್ದುಲ್ ಲತೀಪ್, ಪ್ರತೀಮಾ ಮೊದಲಾದವರು ಇದ್ದರು.

 

Exit mobile version