Kundapra.com ಕುಂದಾಪ್ರ ಡಾಟ್ ಕಾಂ

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ – ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಪ್ರಸಕ್ತ ಸಾಲಿನಲ್ಲಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಮತ್ತು ಪಾರ್ಸಿ ಜನಾಂಗದವರಿದ ನಿಗಮದ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್‌ಲೈನ್ kmdc.kar.nic.in/loan  ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 10 ಕೊನೆಯ ದಿನವಾಗಿದ್ದು, ದಾಖಲಾತಿಗಳೊಂದಿಗೆ ಅರ್ಜಿಯನ್ನು ಜಿಲ್ಲಾ ಕಛೇರಿಗೆ ಸಲ್ಲಿಸಲು ಡಿಸೆಂಬರ್ 21 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಉಡುಪಿ ಜಿಲ್ಲೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಮೈಕ್ರೋ ಸಾಲ ಯೋಜನೆ-ಮಹಿಳೆಯರಿಂದ ಅರ್ಜಿ ಆಹ್ವಾನ

ಕೋವಿಡ್-19ರ ಪಿಡುಗಿನಿಂದಾಗಿ ತೊಂದರೆಗೊಳಗಾದ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಯಾವುದೇ ಯೋಜನೆಯಲ್ಲೂ ಇದುವರೆಗೆ ಸಾಲ, ಸಹಾಯಧನ ಪಡೆಯದ ಇರುವ ಅಲ್ಪಸಂಖ್ಯಾತ ಸಮುದಾಯದ ಅಂತ್ಯೋದಯ/ ಬಿಪಿಎಲ್ ಕಾರ್ಡ್ ಹೊಂದಿರುವ 25 ರಿಂದ 50 ವಯೋಮಾನದೊಳಗಿನ ಮಹಿಳೆಯರಿಗೆ ತಳ್ಳುವ ಗಾಡಿಯಲ್ಲಿ ವ್ಯಾಪಾರ, ಬೀದಿ ವ್ಯಾಪಾರ, ಜಾತ್ರೆಗಳಲ್ಲಿ ವ್ಯಾಪಾರ, ಕಿರಾಣಿ ಅಂಗಡಿ, ಅರಿಷಿನ/ಕುಂಕುಮ/ ಅಗರಬತ್ತಿ/ಕರ್ಪೂರ, ಪಾದಚಾರಿ ಮಾರ್ಗದಲ್ಲಿ ಟೀ/ಕಾಫಿ ಮಾರಾಟ, ಎಳನೀರು ವ್ಯಾಪಾರ, ಹೂವಿನ ವ್ಯಾಪಾರ, ತರಕಾರಿ ವ್ಯಾಪಾರ, ಹಣ್ಣಿನ ವ್ಯಾಪಾರ, ಇನ್ನಿತರ ಸಣ್ಣ ವ್ಯಾಪಾರ ನಡೆಸಲು ಆರಂಭಿಕ ಬಂಡವಾಳಕ್ಕಾಗಿ 10,000 ರೂ. ಮೊತ್ತದ ಅಲ್ಪಾವಧಿ ಸಾಲ ಯೋಜನೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಉಡುಪಿ ಜಿಲ್ಲೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Exit mobile version