ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಬರುವ ಜಿಲ್ಲೆಯ ಮಕ್ಕಳ ರಕ್ಷಣಾ ಘಟಕ, ಉಡುಪಿ ಜಿಲ್ಲೆಯಲ್ಲಿ ಖಾಲಿ ಇರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ನವೆಂಬರ್ 27 ರ ಒಳಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ. ಸಂ: 0820-2574964 ನ್ನು ಸಂಪರ್ಕಿಸುವಂತೆ ಜಿಲ್ಲಾ ಸಮಗ್ರ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.