Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ಎನ್.ಅರ್ಸ್. ನಂದಿನಿ ಹೋಟೆಲ್‌ನಲ್ಲಿ ಬೆಂಕಿ ಅವಘಡ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶಾಸ್ತ್ರಿ ವೃತ್ತದ ಸಮೀಪದಲ್ಲಿರುವ ಎನ್. ಅರ್ಸ್. ನಂದಿನಿ ಹೋಟೆಲ್‌ನಲ್ಲಿ ಮಂಗಳವಾರ ಮಧ್ಯಾಹ್ನ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು,  ಘಟನಾ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಹೋಟೆಲ್ ಸಿಬ್ಬಂದಿಗಳು ಗ್ರಾಹಕರನ್ನು ಹೊರಕ್ಕೆ ಕಳುಹಿಸಿದ್ದರು. ಅಗ್ನಿಶಾಮಕದಳದ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

Exit mobile version