Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ದೀಪಾವಳಿ ಸಂಭ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ದೀಪಾವಳಿ ಆಚರಣೆ ನಡೆಯಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಮಾತನಾಡಿ, ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ದೀಪಾವಳಿ ಹಬ್ಬಕ್ಕೆ ಮಹತ್ವದ ಸ್ಥಾನವಿದೆ. ಪ್ರದೇಶವಾರು ಅನನ್ಯತೆಯನ್ನು ಹೊಂದಿರುವ, ಕೃಷಿ ಸಂಸ್ಕೃತಿಯೊಂದಿಗೆ ಬೆಸೆದುಕೊಂಡಿರುವ ಹಬ್ಬ ದೀಪಾವಳಿ. ಜಾಗತೀಕರಣಕ್ಕೆ ತೆರೆದುಕೊಂಡ ಬಂಡವಾಳಶಾಹಿ ಮನಸ್ಸಿನ ಇಂದಿನ ಜಗತ್ತಿನಲ್ಲಿ ಹಬ್ಬಗಳು ತಮ್ಮ ನೈಜತೆಯನ್ನು ಕಳೆದುಕೊಳ್ಳುತ್ತಿರುವುದು ವಿಷಾಧನೀಯ. ವಿದ್ಯಾರ್ಥಿಗಳು ಸಾಂಸ್ಕೃತಿಕ ಅನನ್ಯತೆಯನ್ನು ಹೊಂದಿರುವ ಹಬ್ಬಗಳನ್ನು ಸಂಭ್ರಮಿಸಬೇಕು ಎಂದು ಹೇಳಿದರು.

ವಿಭಾಗದ ಮುಖ್ಯಸ್ಥ, ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಛೇರಿ ಸಿಬ್ಬಂದಿ ಸುಧೀಂದ್ರ ಕೆ. ಎಸ್. ದೀಪಾವಳಿ ಹಬ್ಬದ ಬಲೀಂದ್ರನನ್ನು ಕರೆಯುವ ಸೊಲ್ಲುಗಳನ್ನು ಹೇಳಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಭಾಗದ ಉಪನ್ಯಾಸಕಿ ರೇಷ್ಮಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ಪ್ರವೀಣಾ ಮಹಾಬಲ ಪೂಜಾರಿ ವಂದಿಸಿದರು.

Exit mobile version