Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಪೊಲೀಸ್ ಠಾಣೆಗೆ ಬ್ಯಾರಿಕೇಡ್ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಅಲ್‌ಪೈನ್ ಅಸೋಸಿಯೇಟ್ಸ್ ಇದರ ವತಿಯಿಂದ ಗಂಗೊಳ್ಳಿ ಪೊಲೀಸ್ ಠಾಣೆಗೆ ಎರಡು ಬ್ಯಾರಿಕೇಡ್‌ಗಳನ್ನು ಕೊಡುಗೆಯಾಗಿ ನೀಡಲಾಯಿತು.

ನಾಯಕವಾಡಿ – ಗುಜ್ಜಾಡಿಯಲ್ಲಿರುವ ಗಂಗೊಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಚೆಕ್‌ಪೋಸ್ಟ್ ಬಳಿ ನಡೆದ ಸರಳ ಸಮಾರಂಭದಲ್ಲಿ ಅಲ್‌ಪೈನ್ ಅಸೋಸಿಯೇಟ್ಸ್‌ನ ಮಾಲೀಕ ಜಹೀರ್ ಅಹಮ್ಮದ್ ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ಭೀಮಾಶಂಕರ ಎಸ್. ಅವರಿಗೆ ಬ್ಯಾರಿಕೇಡ್‌ಗಳನ್ನು ಹಸ್ತಾಂತರಿಸಿದರು.

ಗಂಗೊಳ್ಳಿ ಜಮಾತುಲ್ ಮುಸ್ಲಿಮಿನ್ ಅಧ್ಯಕ್ಷ ಪಿ.ಎಂ.ಹಸೈನಾರ್, ಉಪಾಧ್ಯಕ್ಷ ಇಬ್ರಾಹಿಂ ಗಂಗೊಳ್ಳಿ, ಕಾರ್ಯದರ್ಶಿ ರೆಹಾನ್ ಅಹಮ್ಮದ್, ಗಂಗೊಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ ಗಿರೀಶ್ ಮತ್ತಿತರರು ಉಪಸ್ಥಿತರಿದ್ದರು.

Exit mobile version