Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷರಾಗಿ ಹರಿಪ್ರಸಾದ್ ಶೆಟ್ಟಿ, ಉಪಾಧ್ಯಕ್ಷರಾಗಿ ಶರತ್ ಶೆಟ್ಟಿ ಬಾಳಿಕೆರೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕುಂದಾಪುರ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಮಾರಾಟ ಸಂಘದ (ಟಿಎಪಿಸಿಎಂಎಸ್) ಅಧ್ಯಕ್ಷರಾಗಿ ಹೆಚ್. ಹರಿಪ್ರಸಾದ್ ಶೆಟ್ಟಿ, ಉಪಾಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನ.20ರಂದು ಸಂಘದ ಕಚೇರಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಎಸ್.ರಾಜು ಪೂಜಾರಿ, ಮೋಹನ್ ದಾಸ್ ಶೆಟ್ಟಿ, ಕೆ.ಭುಜಂಗ ಶೆಟ್ಟಿ ವಂಡ್ಸೆ, ರವಿ ಗಾಣಿಗ , ಕೆ. ಮೋಹನ್ ಪೂಜಾರಿ, ಆನಂದ ಬಿಲ್ಲವ, ಕೆ. ಸುಧಾಕರ ಶೆಟ್ಟಿ, ಪ್ರಭಾಕರ ಶೆಟ್ಟಿ ಜಡ್ಕಲ್, ಎಸ್. ಜಯರಾಮ ಶೆಟ್ಟಿ ಬೆಳ್ವೆ, ಚಂದ್ರಶೇಖರ ಶೆಟ್ಟಿ, ದಿನಪಾಲ ಶೆಟ್ಟಿ ಉಪಸ್ಥಿತರಿದ್ದರು.

ಚುನಾವಣಾಧಿಕಾರಿಯಾದ ಕುಂದಾಪುರ ಉಪ ವಿಭಾಗದ ಸಹಕಾರಿ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್. ವಿ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯ ಅಧಿಕೃತ ಘೋಷಣೆ ಮಾಡಿದರು.

ನೂತನ ಅಧ್ಯಕ್ಷರಾದ ಹೆಚ್. ಹರಿಪ್ರಸಾದ್ ಶೆಟ್ಟಿ ಅವರು ಮಾತನಾಡಿ ಈ ಭಾಗದ ಹಿರಿಯ ಸಹಕಾರಿಗಳು ಕಟ್ಟಿ ಮುನ್ನೆಡಿಸಿದ ಈ ಪ್ರತಿಷ್ಠಿತ ಸಂಸ್ಥೆಯನ್ನು ಎಲ್ಲರ ಸಹಕಾರ, ಮಾರ್ಗದರ್ಶನದಿಂದ ಮುನ್ನೆಡಿಸುವುದಾಗಿ ತಿಳಿಸಿದರು.

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಎಸ್. ರಾಜು ಪೂಜಾರಿ ಹಾಗೂ ಮಹೇಶ ಹೆಗ್ಡೆ ಮೊಳಹಳ್ಳಿ ನೂತನ ಅಧ್ಯಕ್ಷರು, ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದರು. ನಿರ್ದೇಶಕ ಕೆ.ಸುಧಾಕರ ಶೆಟ್ಟಿ ನಿರ್ದೇಶಕರ ಪರವಾಗಿ ಮಾತನಾಡಿದರು. ಸಂಸ್ಥೆಯ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಚ್. ಶೋಭಾ ಸ್ವಾಗತಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು.

Exit mobile version