Site icon Kundapra.com ಕುಂದಾಪ್ರ ಡಾಟ್ ಕಾಂ

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯಿಂದ ಗಣೇಶ ಪೂಜಾರಿಗೆ ಸನ್ಮಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹಾಜಿ ಕೆ ಮೊಹಿದ್ದಿನ್ ಬ್ಯಾರಿ ಸ್ಮಾರಕ ಪ್ರೌಢ ಶಾಲೆ ಕೋಡಿ ಇಲ್ಲಿನ ಹಳೇ ವಿದ್ಯಾರ್ಥಿಯಾದ ಗಣೇಶ ಪೂಜಾರಿಯವರು Forbes India Top 100 People Managers List ನಲ್ಲಿ ಒಬ್ಬರಾಗಿ ಆಯ್ಕೆಯಾಗಿದ್ದಕ್ಕಾಗಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.

ಸನ್ಮಾನಿತ ಗಣೇಶ ಪೂಜಾರಿ ಮಾತನಾಡಿ ಯಾವುದೇ ವ್ಯಕ್ತಿಯ ಸಾಧನೆಗೆ ಶಾಲೆಯಲ್ಲಿ ಕಲಿತ ಮಾಧ್ಯಮಗಳು ಮುಖ್ಯವಲ್ಲ. ಸತತ ಪರಿಶ್ರಮ ಮತ್ತು ಗುರಿ ಸಾಧಿಸುವ ಛಲ ಮನುಷ್ಯನನ್ನು ಉನ್ನತಿಯೆಡೆಗೆ ಕೊಂಡೊಯ್ಯುತ್ತದೆ ಎಂದು ಹೇಳಿದರು.

ಈ ಸಮಾರಂಭದ ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ಎಮ್ ಅಬ್ದುಲ್ ರೆಹಮಾನ ಬ್ಯಾರಿ ವಹಿಸಿ, ಗಣೇಶ್ ಪೂಜಾರಿ ನಮ್ಮ ಇಂದಿನ ವಿದ್ಯಾರ್ಥಿಗಳಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಅಧ್ಯಕ್ಷೀಯ ನುಡಿ ನುಡಿದರು.

ಪುರಸಭಾ ಸದಸ್ಯೆ ಕಮಲಾ, ಬ್ಯಾರೀಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಸಲಹೆಗಾರ ಅಬುಷೇಕ್, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರುಗಳಾದ ಪ್ರಕಾಶ್ ಅಂಚನ್ ಮತ್ತು ಮುಸ್ತರೀನ್ ಹಾಗೂ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿವಿಧ ವಿಭಾಗಗಳ ಪ್ರಾಂಶುಪಾಲರಾದ ಡಾ.ಶಮೀರ ಮತ್ತು ಸಿದ್ದಪ್ಪ ಕೆ.ಎಸ್ ಉಪಸ್ಥಿತರಿದರು.

ಹಾಜಿ ಕೆ ಮೊಹಿದ್ದಿನ್ ಬ್ಯಾರಿ ಸ್ಮಾರಕ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಜಯಂತಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳ್ನಾಡಿದರು. ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಶಾಲೆಯ ಮುಖ್ಯೋಪಾಧ್ಯಾಯಿನಿ ಅಶ್ವಿನಿ ಶೆಟ್ಟಿ ವಂದಿಸಿದರು. ಸಹ ಶಿಕ್ಷಕ ಜಯಶೀಲ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

Exit mobile version