ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಉಡುಪಿ ಜಿಲ್ಲೆ, ತಾಲೂಕು ಆರೋಗ್ಯ ಅಧಿಕಾರಿ ಕಛೇರಿ ಕುಂದಾಪುರ, ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರ, ಮರವಂತೆ ಇದರ ಆಡಳಿತ ವೈದ್ಯಾಧಿಕಾರಿ ಡಾ. ಸನ್ಮಾನ್ ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು. ಕುಂದಾಪುರ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಲಕ್ಷ್ಮೀ, ತಾಲೂಕು ಆರೋಗ್ಯ ಕಾರ್ಯಕ್ರಮದ ವ್ಯವಸ್ಥಾಪಕ ಪ್ರದೀಪ್, ಆರೋಗ್ಯ ಸಹಾಯಕ ಹುಲಿಯಪ್ಪ ಗೌಡ ಉಪಸ್ಥಿತರಿದ್ದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶಿವರಾಜ್ ಸಿ. ನಾವುಂದ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ಪ್ರವೀಣ್ ಮೊಗವೀರ ಗಂಗೊಳ್ಳಿ ವಂದಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹ ಯೋಜನಾಧಿಕಾರಿ ರೇಷ್ಮಾ ಶೆಟ್ಟಿ ನಿರೂಪಿಸಿದರು.