ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇತಿಹಾಸ ಪ್ರಸಿದ್ಧ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಮನ್ಮಹಾ ರಥೋತ್ಸವ – ಉಪ್ಪುಂದದ ಕೊಡಿಹಬ್ಬ ಮಂಗಳವಾರ ಸಂಭ್ರಮ, ಸಡಗರದಿಂದ ಜರುಗಿತು.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ದ್ವಿತೀಯ ಜಾತ್ರೆ ಉಪ್ಪುಂದ ಕೊಡಿಹಬ್ಬವಾಗಿದ್ದು, ಇಲ್ಲಿನ ಗ್ರಾಮದೇವತೆ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ವಾರ್ಷಿಕ ಜಾತ್ರಾ ಮಹೋತ್ಸವಕ್ಕೆ ಧ್ವಜಾರೋಹಣದೊಂದಿಗೆ ಚಾಲನೆ ನೀಡಲಾಗಿತ್ತು.
ರಥೋತ್ಸವ ದಿನ ದೇವಳ ತಂತ್ರಿಗಳ ನೇತೃತ್ವದಲ್ಲಿ ದೇವಳದಲ್ಲಿ ಪಂಚಾಮೃತ ಅಭಿಷೇಕ, ವಿಶೇಷ ಭೂತ ಬಲಿ ಸೇರಿದಂತೆ ಹಲವು ಧಾರ್ಮಿಕ ವಿಧಿವಿಧಾನ ನಡೆಯಿತು. ಬಳಿಕ ದೇವಿಗೆ ಹರಕೆ ರೂಪದಲ್ಲಿ ಬಂದ ಸೀರೆಗಳನ್ನು ಬಹಿರಂಗ ಹರಾಜು ಮಾಡಲಾಯಿತು. ಸಂಜೆ ನಡೆದ ರಥೋತ್ಸವದಲ್ಲಿ ಸಹಸ್ರಾರು ಭಕ್ತರು ರಥ ಎಳೆದು ಸಂಭ್ರಮಿಸಲಿದ್ದಾರೆ. ರಾತ್ರಿ ದೇವರ ಅವಭ್ರತಸ್ನಾನ ನಡೆಯಲಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋವಿಡ್ ನಿರ್ಬಂಧ ಹಿನ್ನೆಲೆಯಲ್ಲಿ ಎಂದಿನಂತೆ ಜನಸಂದಣಿ ಇರಲಿಲ್ಲ. ಬೆಳಿಗ್ಗೆಯಿಂದಲೇ ದೇವರಿಗೆ ಪೂಜೆ ಸಲ್ಲಿಸಿ ತೆರಳುವ ದೃಶ್ಯ ಸಾಮಾನ್ಯವಾಗಿತ್ತು. ಜಾತ್ರೆಯ ಅಂಗಡಿಗಳನ್ನು ತೆರೆದಿರಲಿಲ್ಲ. ದೇವಳಕ್ಕೆ ಆಗಮಿಸುವ ಎಲ್ಲಾ ಮಾರ್ಗಗಳಲ್ಲಿ ಪೊಲೀಸರು ಬಂದೋವಸ್ತ್ ಮಾಡಿದ್ದರು. ಬೈಂದೂರು ಪೊಲೀಸ್ ವೃತ್ತ ನಿರೀಕ್ಷಕರ ಮಾರ್ಗದರ್ಶನದಲ್ಲಿ ಬೈಂದೂರು, ಕೊಲ್ಲೂರು ಠಾಣಾ ಪಿಎಸ್ಐ ನೇತೃತ್ವದಲ್ಲಿ ಬಂದೋವಸ್ತ್ ಮಾಡಲಾಗಿತ್ತು.

ಇದನ್ನೂ ಓದಿ:
► ಕೋಟೇಶ್ವರದ ಕೊಡಿ ಹಬ್ಬ: ಮನ್ಮಹಾರಥೋತ್ಸವ, ಹಬ್ಬ ಧಾರ್ಮಿಕ ಕಾರ್ಯಗಳಿಷ್ಟೇ ಸೀಮಿತ – https://kundapraa.com/?p=42877.