ಕುಂದಾಪ್ರ ಡಾಟ್ ಕಾಂ ಸುದ್ದಿ
ಬೈಂದೂರು: ಉಡುಪಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯು ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಕಾರ್ಯಕ್ರಮ(ಎನ್‌ಪಿಇಪಿ)ಅಡಿಯಲ್ಲಿ ಪ್ರೌಢಶಾಲಾ ವಿಧ್ಯಾರ್ಥಿಗಳಿಗೆ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಆನ್‌ಲೈನ್ ಜನಪದ ನೃತ್ಯ ಸ್ಪರ್ಧೆಯಲ್ಲಿ ಆಲೂರು ಪ್ರೌಢ ಶಾಲೆ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ.
ವಿಜೇತ ವಿದ್ಯಾರ್ಥಿಗಳಾದ ಅಂಕಿತಾ, ಸುರಕ್ಷಾ, ಸುಜನಾ, ದೀಪಿಕಾ, ಸಿಂಚನಾ, ಸಹನಾ ಅವರು ನಗದು ಪುರಸ್ಕಾರ ಮತ್ತು ಪ್ರಶಸ್ತಿ ಪತ್ರ ಪಡೆದಿದ್ದಾರೆ.
