ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಕೋಡಿ, ಕುಂದಾಪುರ ಹಾಗೂ ಆರೋಗ್ಯ ರಕ್ಷಾ ಸಮಿತಿ ಕೋಡಿ ಇವರ ಸಂಯುಕ್ತ ಆಶ್ರಯದಲ್ಲಿ ಹದಿಹರೆಯದ ಹೆಣ್ಣುಮಕ್ಕಳಿಗೆ ಆರೋಗ್ಯ ಮತ್ತು ಶುಚಿತ್ವದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಜಿ ಅಬ್ದುಲ್ ರೆಹಮಾನ್ ವಹಿಸಿದ್ದರು. ಡಾ. ಉಮೇಶ್ ನಾಯಕ್ ವೈದ್ಯಾಧಿಕಾರಿ, ಕೋಡಿ ಕುಂದಾಪುರ ಕಾರ್ಯಕ್ರಮದ ಕುರಿತಾಗಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ವಿದ್ಯಾಲಕ್ಷ್ಮಿ ಕಿರಿಯ ಆರೋಗ್ಯ ಸಹಾಯಕಿ, ಹೆಣ್ಣುಮಕ್ಕಳ ಆರೋಗ್ಯ ಮತ್ತು ಶುಚಿತ್ವವನ್ನು ಹೇಗೆ ಕಾಪಾಡಿಕೊಳ್ಳಬೇಕು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು. ಹಾಗೆಯೇ ಹಿರಿಯ ಆರೋಗ್ಯ ಸಹಾಯಕಿ ಚಂದ್ರಾವತಿ ಹದಿಹರೆಯದ ಹೆಣ್ಣುಮಕ್ಕಳ ಸಮಸ್ಯೆಗಳ ಬಗ್ಗೆ ಮಾತನಾಡಿದರು. ಪ್ರಾಂಶುಪಾಲರಾದ ಡಾ. ಶಮೀರ್ ವಿದ್ಯಾರ್ಥಿನಿಯರಿಗೆ ಹಿತನುಡಿಯನ್ನಾಡಿ ಕಾರ್ಯಕ್ರಮದ ಉದ್ದೇಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆ ಸಾಧು ಮತ್ತು ಆರೋಗ್ಯ ಕೇಂದ್ರದ ಸಿಬ್ಬಂಧಿ ಉಪಸ್ಥಿತರಿದ್ದರು ಹರ್ಷಿತಾ ಗಣಕ ವಿಭಾಗದ ಉಪನ್ಯಾಸಕಿ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿದರು. ಮಾಲತಿ, ವಾಣಿಜ್ಯ ವಿಭಾಗ ವಂದಿಸಿದರು.