Site icon Kundapra.com ಕುಂದಾಪ್ರ ಡಾಟ್ ಕಾಂ

ಒತ್ತಡ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಾಗಾರ

????????????????????????????????????

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸಿಎಸ್ಸೆಸ್‌ಟಿಇ ಯೋಜನೆಯಡಿಯಲ್ಲಿ ಫಿಟ್ ಇಂಡಿಯಾ, ಖೇಲೋ ಇಂಡಿಯಾ ಹಾಗೂ ಒತ್ತಡ ನಿರ್ವಹಣೆ ಬಗ್ಗೆ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಿಗೆ ಒಂದು ದಿನದ ಮಾಹಿತಿ ಕಾರ್ಯಾಗಾರ ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.

ಸಂಸ್ಥೆ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಉದ್ಘಾಟಿಸಿದರು. ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಉಪ ಪ್ರಾಂಶುಪಾಲ ಅಶೋಕ್ ಕಾಮತ್ ಮಾತನಾಡಿದರು.

ದೈಹಿಕ ಶಿಕ್ಷಣ ಶಿಕ್ಷಕರಾದ ಅಜಾದ್ ಅಹಮದ್, ಸುಧಾಕರ ಶೆಟ್ಟಿ, ಸತ್ಯಾನಂದ ಸಾಲಿನ್ಸ್ ಹಾಗೂ ಅರುಣಕುಮಾರ ಶೆಟ್ಟಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ಪ್ರೌಢಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಸ್ವಾಗತಿಸಿದರು. ಸಂಗೀತ ಶಿಕ್ಷಕಿಯರಾದ ರಮಣಿ ಹಾಗೂ ಉಷಾ ಪ್ರಾರ್ಥಿಸಿದರು. ಶಿಕ್ಷಕ ರವೀಂದ್ರ ಪೂಜಾರಿ ನಿರೂಪಿಸಿ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣ ವಂದಿಸಿದರು.

ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ ಉಪನ್ಯಾಸಕಿ ಶೋಭಾ ಶೆಟ್ಟಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಸದಾನಂದ ಬೈಂದೂರು ಇದ್ದರು.

 

Exit mobile version