Site icon Kundapra.com ಕುಂದಾಪ್ರ ಡಾಟ್ ಕಾಂ

ಮೈಲಾರೇಶ್ವರ ಯುವಕ ಮಂಡಲದ ವಾರ್ಷಿಕ ಮಹಾ ಸಭೆ, ನೂತನ ಪಧಾದಿಕಾರಿಗಳ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮೈಲಾರೇಶ್ವರ ಯುವಕ ಮಂಡಲದ ವಾರ್ಷಿಕ ಮಹಾ ಸಭೆಯು ಯುವಕ ಮಂಡಲದ ಕಛೇರಿಯಲ್ಲಿ ನೆಡೆಯಿತು.

ಸಭೆಯಲ್ಲಿ ಯುವಕ ಮಂಡಲದ ಅಧ್ಯಕ್ಷ ಅರುಣ ಕುಮಾರ್ ಬಾಣ, ಗೌರವ ಅಧ್ಯಕ್ಷ ಕೆ ಆರ್ ಪ್ರದೀಪ್ ಹಿರಿಯ ಸದಸ್ಯ ರಮೇಶ ಬಿಲ್ಲವ, ನಾಗರಾಜ ರಾಯಪ್ಪನ ಮಠ, ಕಾರ್ಯದರ್ಶಿ ಸುಧೀರ್ ಕೃಷ್ಣ ಹಾಜರಿದ್ದರು. 2020-21 ಸಾಲಿನ ನೂತನ ಅಧ್ಯಕ್ಷರಾಗಿ ನಾಗರಾಜ ದಫೇದಾರ್ ಹಾಗೂ ಕಾರ್ಯದರ್ಶಿಯಾಗಿ ಗಣೇಶ್ ಡಿ ನಾಯಕ್ ಆಯ್ಕೆಯಾದರು. ಇದೇ ಸಂದರ್ಭದಲ್ಲಿ 2019-20ರ ಸಾಲಿನ ಲೆಕ್ಕಪತ್ರವನ್ನು ಮಂಡಿಸಲಾಯಿತು. ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿ ಡಿ.ಕೆ ಪ್ರಭಾಕರ್ ಕಾರ್ಯಕ್ರಮವನ್ನು ನಿರೂಪಿಸಿದರು.

Exit mobile version