Site icon Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ಎಮ್‌ಎಸ್‌ಎನ್‌ಐಎಮ್ ನಡುವೆ ಒಡಂಬಡಿಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಮತ್ತು ಮನೆಲ್ ಶ್ರೀನಿವಾಸ ನಾಯಕ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್, ಮಂಗಳೂರು ಇವರು, ಎರಡೂ ಸಂಸ್ಥೆಗಳ ಪ್ರಾಧ್ಯಾಪಕರ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮತ್ತು ಕೊಡುಕೊಳ್ಳುವಿಕೆಗಾಗಿ ಒಡಂಬಡಿಕೆ ಪತ್ರಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಹಾಗೂ ಮನೆಲ್ ಶ್ರೀನಿವಾಸ ನಾಯಕ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಮಂಗಳೂರಿನ ನಿರ್ದೇಶಕರಾದ ಡಾ. ಮೋಲಿ ಚೌಧರಿ ಸಹಿ ಹಾಕುವ ಮೂಲಕ ಸಮ್ಮತಿ ಸೂಚಿಸಿದರು.

ಕಾಲೇಜಿನ ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಮನೆಲ್ ಶ್ರೀನಿವಾಸ ನಾಯಕ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸಹಾಯಕ ಪ್ರಾಧ್ಯಾಪಕ ಡಾ. ಶರಣ್ ಕುಮಾರ್ ಶೆಟ್ಟಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ವೀಣಾ ಭಟ್, ವ್ಯವಹಾರ ನಿರ್ವಹಣಾ ವಿಭಾಗದ ಮುಖ್ಯಸ್ಥೆ ನಂದಾ ರೈ ಉಪಸ್ಥಿತರಿದ್ದರು.

Exit mobile version